ಕೃಷಿಗೆ ನೆರವಾಗಲು ಶೀಘ್ರ ನಾಲೆ ಅಭಿವೃದ್ಧಿ: ಶಾಸಕ ರವಿಕುಮಾರ್ ಗಣಿಗ ಭರವಸೆ

Launching canal development Mandya
Published on

ಮಂಡ್ಯ: ಐದು ಕೋಟಿ ರೂ ವೆಚ್ಚದಲ್ಲಿ ನಾಲೆಯ ಅಭಿವೃದ್ಧಿಗೆ ಟೆಂಡರ್ ಕರೆದಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು. ಯೋಜನೆ ಪೂರ್ಣಗೊಂಡರೆ ಬೆಳೆಗಳಿಗೆ ಸರಾಗವಾಗಿ ನೀರು ಹರಿಯಲಿದೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.

ತಾಲೂಕಿನ ಕಟ್ಟೇದೊಡ್ಡಿ-ಮಲ್ಲಯ್ಯನದೊಡ್ಡಿ ಗ್ರಾಮದಲ್ಲಿ 3.50 ಕೋಟಿ ರೂ ವೆಚ್ಚದಲ್ಲಿ ಮುಖ್ಯರಸ್ತೆಯ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮಸ್ಥರ ಬೇಡಿಕೆಯಂತೆ ಮಲ್ಲಯ್ಯನದೊಡ್ಡಿ ಗ್ರಾಮದಿಂದ ಎನ್‌ಎಚ್-275 ಮಾರ್ಗವಾಗಿ ಕಟ್ಟೇದೊಡ್ಡಿಗೆ ಸೇರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಶುರು ಮಾಡಲಿದ್ದು, ಶೀಘ್ರದಲ್ಲೇ ಕಾಮಗಾರಿ ಮುಗಿಸಿ ಗ್ರಾಮದ ಜನರಿಗೆ ಅನುಕೂಲವಾಗಲಿದೆ. ಮುಂದಿನ ಮೂರು ವರ್ಷಗಳಲ್ಲಿ ಗ್ರಾಮದ ಬೀದಿಗಳಿಗೆ ಸಿಮೆಂಟ್ ರಸ್ತೆಯನ್ನಾಗಿ ಮಾಡುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು.

ಮನ್‌ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ, ಕಟ್ಟೇದೊಡ್ಡಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಎನ್.ಸಿದ್ದೇಗೌಡ, ಮುಖಂಡರಾದ ಚಂದ್ರಶೇಖರ್, ಪುಟ್ಟಸ್ವಾಮಿ, ಶಿವರಾಂ, ಮಂಜು, ಗುತ್ತಿಗೆದಾರ ಕರೀಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net