ಅಭಿವೃದ್ಧಿಗೆ ಕಾಮಗಾರಿಗಳಿಗೆ ಚಾಲನೆ

1001394580
ಪಟ್ಟಣದ ಡಿ.ದೇವರಾಜ ಅರಸು ಹೆಸರಿನ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಕಚೇರಿ ಕಟ್ಟಡವನ್ನು ಶಾಸಕ ಎಚ್.ಡಿ.ರೇವಣ್ಣ ಉದ್ಘಾಟಿಸಿದರು. ತಹಸೀಲ್ದಾರ್ ವೈ.ಎಂ.ರೇಣುಕುಮಾರ್, ಪಿಡಬ್ಲುೃಡಿ ಎಇಇ ರುಕ್ಮಾಂಗದ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೃಷ್ಣಮೂರ್ತಿ, ಬಿಸಿಎಂ ವಿಸ್ತರಣಾಧಿಕಾರಿ ಹರೀಶ್ ಇತರರು ಇದ್ದರು.
Published on

ಹೊಳೆನರಸೀಪುರ: ಪಟ್ಟಣದಲ್ಲಿ ಡಿ. ದೇವರಾಜ ಅರಸ್, ವಾಲ್ಮೀಕಿ ಭವನಗಳ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಚ್.ಡಿ.ರೇವಣ್ಣ ಚಾಲನೆ ನೀಡಿದರು.

ಪಟ್ಟಣದ ಸರ್ಕಾರಿ ಪದವಿ ಕಾಲೇಜು ಸಮೀಪದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ಕಚೇರಿ ಹಾಗೂ ಮಲ್ಲಪ್ಪನಹಳ್ಳಿ ಮಾರ್ಗದ ರೈಲ್ವೇ ಗೇಟ್ ಸಮೀಪ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನವನ್ನು ಗುರುವಾರ ಉದ್ಘಾಟಿಸಿದರು.

ಪೂಜೆ ಕೊಪ್ಪಲು ಗ್ರಾಮದ ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿಗೊಳಿಸಲು ಕಾಮಗಾರಿಗೆ ಹಾಗೂ ಪಟ್ಟಣದ ಪ್ರವಾಸಿ ಮಂದಿರ ಉನ್ನತೀಕರಣ ಮತ್ತು ಹೆಚ್ಚುವರಿ ಕಟ್ಟಡ ನಿರ್ಮಿಸಲು ಚಾಲನೆ ನೀಡಿದರು. ಇದಕ್ಕಾಗಿ 2 ಕೋಟಿ ರೂ. ಅನುದಾನ ಬಳಕೆ ಮಾಡುತ್ತಿರುವುದಾಗಿ ತಿಳಿಸಿದ ಅವರು, ಶೀಘ್ರವೇ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದರು.

ವಾಲ್ಮೀಕಿ ಸಮುದಾಯದವರು ಪ್ರಸ್ತುತ ಉದ್ಘಾಟನೆಯಾಗಿರುವ ಭವನದ ನಿರ್ವಹಣೆ ಹಾಗೂ ಸ್ವಚ್ಛತೆಗೆ ಪ್ರಾಮುಖ್ಯ ನೀಡಬೇಕು. ಪ್ರತಿ ತಿಂಗಳು ಸಮುದಾಯದ ಏಳಿಗೆಗೆ ಸಂಘಟನಾ ಚಟುವಟಿಕೆ ಮತ್ತು ಸಂಘದ ಕೆಲಸ ಕಾರ್ಯಗಳನ್ನು ನಡೆಸಲು ಭವನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶುಭ ಸಮಾರಂಭಗಳಿಗೂ ಅನುಕೂಲವಾಗುವಂತೆ ಉತ್ತಮವಾಗಿ ನಿರ್ಮಿಸಲಾಗಿದೆ. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ಸಮುದಾಯವನ್ನು ಮುನ್ನಡೆಸಿಕೊಂಡ ಹೋಗಬೇಕೆಂದು ಸಲಹೆ ನೀಡಿದರು.

ಲೋಕೋಪಯೋಗಿ ಇಲಾಖೆಯಡಿ ಪ್ರಸ್ತುತ ಎಲ್ಲ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಗುಣಮಟ್ಟ ಕಾಯ್ದುಕೊಳ್ಳುವಂತೆ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ತಹಸೀಲ್ದಾರ್ ವೈ.ಎಂ.ರೇಣುಕುಮಾರ್, ಪಿಡಬ್ಲುೃಡಿ ಎಇಇ ರುಕ್ಮಾಂಗದ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೃಷ್ಣಮೂರ್ತಿ, ಬಿಸಿಎಂ ವಿಸ್ತರಣಾಧಿಕಾರಿ ಹರೀಶ್, ಪುರಸಭಾ ಮುಖ್ಯಾಧಿಕಾರಿ ಶಿವಶಂಕರ್ ಹಾಗೂ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net