ಕಾನೂನು ಕಾಲೇಜು ಕ್ರೀಡಾ ಚಟುವಟಿಕೆ ಉದ್ಘಾಟನೆ

Published on

ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ಸಂಸ್ಥೆಯ ಗುರುಸಿದ್ದಪ್ಪ ಕೋತಂಬ್ರಿ ಕಾನೂನು ಮಹಾವಿದ್ಯಾಲಯದ ಕಾಲೇಜ್ ಯೂನಿಯನ್ ಹಾಗೂ ಕ್ರೀಡಾ ಚಟುವಟಿಕೆ ಉದ್ಘಾಟನೆ ಸಮಾರಂಭ ಅ. 11ರಂದು ಬೆಳಗ್ಗೆ 11ಕ್ಕೆ ಏರ್ಪಡಿಸಲಾಗಿದೆ.

ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಧಾರವಾಡದ ನ್ಯಾಷನಲ್ ಫೊರೆನ್ಸಿಕ್ ಸೈನ್ಸ್ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಮಂಜುನಾಥ ಘಾಟೆ, ಕವಿವಿ ಸಿಂಡಿಕೇಟ್ ಸದಸ್ಯ ಡಾ. ಲಿಂಗರಾಜ ಮುಳ್ಳಳ್ಳಿ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಾನೂನು ಕಾಲೇಜಿನ ಪ್ರಾಚಾರ್ಯ ಡಾ. ಜ್ಞಾನೇಶ್ವರ ಚೌರಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net