

ಹುಬ್ಬಳ್ಳಿ: ನಗರದ ಎನ್.ಎಲ್. ಸೊಸೈಟಿಯ ಡಾ. ಆರ್.ಬಿ. ಪಾಟೀಲ್ ಮಹೇಶ ಪಿಯು ಕಾಲೇಜಿನಲ್ಲಿ ವಿದ್ಯಾಥಿರ್ಗಳಿಗೆ ಪೋಕ್ಸೋ ಕಾಯ್ದೆ 2012 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಕುರಿತು ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಣಾ ಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ ಮಾರ್ಗದರ್ಶನ ಮತ್ತು ನಿರ್ದೇಶನದಂತೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಧಾರವಾಡದ ಸಾಧನಾ ಮಾನವ ಹಕ್ಕುಗಳ ಕೇಂದ್ರದ ಮುಖ್ಯ ಕಾರ್ಯ ನಿರ್ವಾಹಕ ನಿರ್ದೇಶಕಿ ಇಸಾಬೆಲ್ಲಾ ಝೇವಿಯರ್ ಮಾತನಾಡಿ, ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಅದರ ಮಹತ್ವ ಕುರಿತು ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ರಾಮ ಮೋಹನ್ ಎಚ್.ಕೆ., ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳು ಸುಸಂಸ್ಕೃತರಾಗಬೇಕು. ಸಾಧನೆಯಲ್ಲಿ ತೊಡಗಿಕೊಳ್ಳಬೇಕು. ಆರೋಗ್ಯವಂಥ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.
ಉಪ ಪ್ರಾಚಾರ್ಯ ರಮೇಶ ಹೊಂಬಾಳಿ, ನೀಲ್ ಪ್ರತಾಪನ್ ಉಪಸ್ಥಿತರಿದ್ದರು. ಉಪನ್ಯಾಸಕಿ ಶಿಬಾನಿ ಕಾಕ್ಕರ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾನಕಿ ಫಿಲೊಮಿನಾ
ಸ್ವಾಗತಿಸಿದರು.