ಹೊಸ ಕಾನೂನುಗಳ ಮಾಹಿತಿ ಅಗತ್ಯ -ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್.

mng-30july-sdm
Published on


ಮಂಗಳೂರು : ಕ್ರಿಮಿನಲ್ ಕಾನೂನುಗಳ ಹೆಸರಿನ ಬದಲಾವಣೆ ಸಹಿತ ಮಾಡಲಾದ ಪರಿಷ್ಕಾರಗಳು ನಾವು ದಾಸ್ಯದ ಮನೋವೃತ್ತಿಯಿಂದ ಹೊರ ಬರುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಎಲ್ಲರಿಗೂ ಕಾನೂನಿನ ಅರಿವು ಅಗತ್ಯ . ಹೊಸ ಕಾನೂನುಗಳು ಬಂದಾಗ ಅವುಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ಅಗತ್ಯವಿರುವವರಿಗೆ ತಿಳಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದು ಎಂದು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್.ಹೇಳಿದರು.
ಕೇಂದ್ರ ಸಂವಹನ ಇಲಾಖೆ ಮಂಗಳೂರು ಮತ್ತು ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆದ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತ ಛಾಯಾಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ನ್ಯಾಯ ಸಂಹಿತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಭಾರತೀಯ ಸಾಕ್ಷೃ ಅಧಿನಿಯಮಗಳಲ್ಲಿ ಸಾಕಷ್ಟು ಉತ್ತಮ ಬದಲಾವಣೆಗಳಾಗಿದ್ದು ಡಿಜಿಟಲ್ ಎವಿಡೆನ್ಸ್ ಹಾಗೂ ಅಪರಾಧಿ ಕೃತ್ಯಗಳ ತನಿಖೆಯ ವಿಡಿಯೋ ಚಿತ್ರೀಕರಣ ಇತ್ಯಾದಿ ಉತ್ತಮ ಬೆಳವಣಿಗೆಗಳಾಗಿವೆ ಎಂದರು.
ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ತಾರಾನಾಥ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಮುಖ್ಯ ಅತಿಥಿಯಾಗಿದ್ದರು. ಕ್ಷೇತ್ರ ಪ್ರಚಾರ ಅಧಿಕಾರಿ ತುಕಾರಾಮಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು .
ಎಸ್‌ಡಿಎಂ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅನ್ನಪೂರ್ಣ ಸ್ವಾಗತಿಸಿ, ಸಹಾಯಕ ಪ್ರಾಧ್ಯಾಪಕ ಕಾರ್ತಿಕ ಆನಂದ್ ವಂದಿಸಿದರು.ನೇಹಾ ರಾಮಕೃಷ್ಣನ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net