ಕಾನೂನು ಅರಿವು ಅವಶ್ಯ

4Rayabag2
Published on

ರಾಯಬಾಗ: ಪ್ರತಿಯೊಬ್ಬ ಪ್ರಜೆ ಕಾನೂನಿನ ಅರಿವು ಪಡೆದುಕೊಂಡು ಸಮಾಜದಲ್ಲಿ ಶಾಂತಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಬೇಕು ಎಂದು ವಕೀಲ ಎಂ.ಎಸ್.ಪೂಜಾರಿ ಹೇಳಿದರು.

ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಗ್ರಾಪಂ ಸಭಾಂಗಣದಲ್ಲಿ ಸೋಮವಾರ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ, ಬಾಲ್ಯವಿವಾಹ ಹಾಗೂ ಅತ್ಯಾಚಾರದಂತಹ ಪ್ರಕರಣಗಳನ್ನು ತಡೆಗಟ್ಟಲು ಎಲ್ಲರೂ ಕೈಜೋಡಿಸಬೇಕು ಎಂದರು.

ವಕೀಲ ಡಿ.ಟಿ.ಕಾಮಗೌಡ ಮಾತನಾಡಿ, ತಾಲೂಕು ಕಾನೂನು ಸೇವಾ ಸಮಿತಿಯಿಂದ ಬಡವರು ಹಾಗೂ ಅಸಹಾಯಕರಿಗೆ ಉಚಿತ ಕಾನೂನು ನೆರವು ನೀಡಲಾಗುತ್ತಿದೆ. ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ರಾಮಚಂದ್ರ ಕಾಟೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅಜಾದ ತಾಶೇವಾಲೆ, ವಕೀಲರಾದ ಎಸ್.ಎಂ.ಕಳ್ಳೆ, ಬಿ.ಡಿ.ಮಂಗಸೂಳೆ, ಸದಸ್ಯ ಸಂತೋಷ ಮಂಗಸೂಳೆ, ಕೇದಾರಿ ಡೊಗರೆ, ಶ್ರೀಕಾಂತ ತೇಲಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಇದ್ದರು. ಅನಿಲ ಬೆಳಗಲಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net