ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ

New Joshi 1010
Published on

ಹುಬ್ಬಳ್ಳಿ : ಮಾಜಿ ಸಚಿವ ಎಚ್.ಡಿ. ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೇವಣ್ಣ ಅವರಿಗೆ ವಯಸ್ಸಾಗಿದೆ. ಇಂಥ ಸಂದರ್ಭದಲ್ಲಿ ಇದು ದುರ್ದೈವ ಎಂದು ಪ್ರತಿಕ್ರಿಯಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ರೇವಣ್ಣ ವಿರುದ್ಧ ಮಹಿಳೆ ಅಪಹರಣ ಪ್ರಕರಣ ದಾಖಲಾಗಿದ್ದು, ಅವರ ಬಂಧನವಾಗಿದೆ. ಕಾನೂನು ಪ್ರಕಾರ ಕ್ರಮವಾಗಿದೆ ಎಂದು ಹೇಳಿದರು.

ರೇವಣ್ಣ ವಿರುದ್ಧ ತನಿಖೆ ನಡೆಸುವುದು ಒಳ್ಳೆಯದೇ. ಆದರೆ ಬಂಧನ ಎಷ್ಟು ಸರಿ? ಎಂಬುದನ್ನು ನ್ಯಾಯಾಲಯ ತೀಮಾನಿಸುತ್ತದೆ ಎಂದರು.

ಚುನಾವಣೆ ಪ್ರಚಾರದ ವೇಳೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಮತದಾನದಲ್ಲಿ ಬಿಜೆಪಿ ಧಾರವಾಡ ಸೇರಿದಂತೆ 14 ಲೋಕಸಭೆ ಕ್ಷೇತ್ರಗಳಲ್ಲೂ ಗೆಲುವು ದಾಖಲಿಸಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net