

ಮಂಗಳೂರು : ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ನೀಡಲಾಗುವ ಕಾನೂನು ಸೌಲಭ್ಯಗಳ ಬಗ್ಗೆ ಜನಸಾಮಾನ್ಯರಿಗೆ ಅರಿವು ಅಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ಹೇಳಿದರು.
ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ವತಿಯಿಂದ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಸೋಮವಾರ ಜಿಲ್ಲಾ ಪಂಚಾಯಿಇತಯ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ವರು ಮಾತನಾಡಿದರು
ಜನಸಾಮಾನ್ಯರಿಗೆ ಕೋರ್ಟ್‌ನಲ್ಲಿ ವಕೀಲರನ್ನು ನೇಮಕ ಮಾಡಲು ಸಾಧ್ಯವಾಗದೇ ಇದ್ದಾಗ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕೆಲವು ಅರ್ಹತೆಗಳಿಗೆ ಅನುಗುಣವಾಗಿ ಉಚಿತವಾಗಿ ವಕೀಲರನ್ನು ಒದಗಿಸಲಾಗುತ್ತದೆ. ಪ್ರಾಧಿಕಾರದ ವತಿಯಿಂದ ಹಳ್ಳಿಗಳನ್ನು ದತ್ತು ತೆಗೆದುಕೊಂಡು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿರುವ ಜನರಿಗೆ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದರು/
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಮಾತನಾಡಿ ಕಾನೂನಿನ ಬಗ್ಗೆ ಕಾಯ್ದೆಗಳ ಬಗ್ಗೆ ಪ್ರತಿಯೊಬ್ಬರಿಗೂ ಅರಿವಿರಬೇಕು. ಕಾರ್ಮಿಕರ ಕಾಯ್ದೆಗಳನ್ನು ಮಾಲೀಕನಾದವನು ತಿಳಿದುಕೊಳ್ಳದಿರುವುದು ಅಪರಾಧವಾಗಿದೆ ಎಂದರು.
ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ, ಪ್ರಾದೇಶಿಕ ಆಯುಕ್ತ ಎ. ಪಿ. ಉನ್ನಿಕೃಷ್ಣನ್, ಕಾರ್ಖಾನೆಗಳ ಇಲಾಖೆಯ ಉಪ ನಿರ್ದೇಶಕ ಎಂ. ಎಸ್. ಮಹಾದೇವ್, ಕಾರ್ಮಿಕರ ರಾಜ್ಯ ವಿಮಾ ಯೋಜನೆ ಮತ್ತು ವೈದ್ಯಕೀಯ ಸೇವೆ ಉಪ ಕೇಂದ್ರೀಯ ಕಾಯಾಲಯ ಉಪ ನಿರ್ದೇಶಕ ಗುರುವಿಂದರ್ ಸಿಂಗ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎ. ಉಸ್ಮಾನ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಡಾ. ಬಿ. ಎಸ್. ಹೇಮಲತ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಮನೀಶ್ ನಾಯಕ್ ಉಪಸ್ಥಿತರಿದ್ದರು.