

ಹುಬ್ಬಳ್ಳಿ: ಇಲ್ಲಿಯ ಕೇಶ್ವಾಪುರದ ಮಹಾವೀರ ಕಾಲನಿಯಲ್ಲಿ ವಕೀಲರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಶಂಭುಲಿಂಗಪ್ಪ ಕೆಂಬಾವಿ(34) ಮೃತರು. ಶಂಭುಲಿಂಗಪ್ಪ ಅವರ ತಂದೆ ಬ್ಯಾಂಕ್‌ವೊಂದರಲ್ಲಿ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೆ ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.