ಜಯಪುರ ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ

10
Published on

ಮೈಸೂರು: ಜಯಪುರ ಪೊಲೀಸ್ ಠಾಣೆಯಲ್ಲಿ ವಕೀಲರ ಮೇಲೆ ವಿನಾಕಾರಣ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಸೋಮವಾರ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ನಡೆಯಿತು.


ನ್ಯಾಯಾಲಯದ ಕಲಾಪದಿಂದ ದೂರ ಉಳಿದ ವಕೀಲರು, ಗಾಂಧಿ ಪ್ರತಿಮೆ ಬಳಿ ಸಮಾವೇಶಗೊಂಡರು. ಈ ವೇಳೆ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಕೀಲರಾದ ಬೋರೇಗೌಡ, ಸಿದ್ದೇಗೌಡ ಮತ್ತು ಅಭಿಷೇಕ್ ಎಂಬುವವರು ವಿರುದ್ಧ ಜಯಪುರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಎಫ್‌ಐಆರ್ ದಾಖಲಿಸಿದ್ದಾರೆ. ಇವರ ನಡೆ ಖಂಡನೀಯ. ಪೂರ್ವಾಪರ ಪರಿಶೀಲಿಸದೆ ದೂರು ದಾಖಲಿಸಿದ್ದಾರೆ. ಕೂಡಲೇ ಎಫ್‌ಐಆರ್‌ನಿಂದ ವಕೀಲರ ಹೆಸರು ಕೈಬಿಡಬೇಕೆಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net