ಚಿಕ್ಕಮಗಳೂರಿನಲ್ಲಿ ಪೊಲೀಸರಿಂದ ದೌರ್ಜನ್ಯ ಆರೋಪ: ಮಂಡ್ಯದಲ್ಲಿ ವಕೀಲರ ಪ್ರತಿಭಟನೆ

Lawyers protest against police mandya
Published on

ಮಂಡ್ಯ: ಚಿಕ್ಕಮಗಳೂರಿನ ಯುವ ವಕೀಲ ಪ್ರೀತಂ ಮೇಲೆ ಹಲ್ಲೆ ನಡೆಸಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ವಕೀಲರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿಯ ವಕೀಲರ ಸಂಘದ ಬಳಿ ಜಮಾಯಿಸಿದ ವಕೀಲರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಯಚಾಮರಾಜೇಂದ್ರ ಒಡೆಯರ್ ವೃತ್ತಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು. ಬಳಿಕ ಆರ್.ಪಿ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿಗೆ ಮನವಿ ಸಲ್ಲಿಸಿದರು. ನ.30ರಂದು ವಕೀಲ ಪ್ರೀತಂ ಮೇಲೆ ಸಣ್ಣ ವಿಚಾರಕ್ಕೆ ಪೊಲೀಸರು ಬೂಟಿನ ಕಾಲಿನಲ್ಲಿ ಒದ್ದು ಹಲ್ಲೆ ಮಾಡಿದ್ದಾರೆ. ಜನಸಾಮಾನ್ಯರು ಪೊಲೀಸ್ ಠಾಣೆಗೆ ಬರಲು ಭಯಪಡುತ್ತಿದ್ದಾರೆ. ಇನ್ನು ಸ್ವಯಂ ದೂರು ದಾಖಲಿಸಿಕೊಂಡ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಪ್ರತಿಭಟನೆ ಮಾಡುತ್ತೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ವಕೀಲರ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ, ಕಾರ್ಯದರ್ಶಿ ಸಿದ್ದರಾಜು, ಉಪಾಧ್ಯಕ್ಷ ಮರಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ವಕೀಲರಾದ ಬೂದನೂರು ಬೊಮ್ಮಯ್ಯ, ಗಿರೀಗೌಡ, ನವೀನ್, ಸುಮಿತ್ರಾ, ಚಂದ್ರಕಲಾ, ಶೋಭಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net