

ನೆಲಮಂಗಲ: ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷರೂ ಆದ ರಾಷ್ಟಿ$ಯ ವಕೀಲರ ಪರಿಷತ್ ಉಪಾಧ್ಯಕ್ಷ ವೈ.ಆರ್.ಸದಾಶಿವ ರೆಡ್ಡಿ ಅವರ ಮೇಲಿನ ಹಲ್ಲೆ ಖಂಡಿಸಿ ವಕೀಲರು ಕೆಲಕಾಲ ಮೌನ ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿ ಮುಂಭಾಗದಲ್ಲಿ ತಾಲೂಕು ವಕೀಲ ಸಂದ ನೇತೃತ್ವದಲ್ಲಿ ಸಮಾವೇಶಗೊಂಡ ನೂರಾರು ಮಂದಿ , ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಹಾಗೂ ವಕೀಲರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ೂಷಣೆ ಕೂಗಿದರು. ಬಳಿಕ ಕೈಗೊಳ್ಳುವಂತೆ ತಹಸೀಲ್ದಾರ್ ಅಮೃತ್ಆತ್ರೇಶ್ಗೆ ಮನವಿ ಸಲ್ಲಿಸಿದರು.
ತಾಲೂಕು ವಕೀಲರ ಸಂದ ಅಧ್ಯಕ್ಷ ಕೇಶವಮೂರ್ತಿ ಮಾತನಾಡಿ, ವಕೀಲರ ಪರಿಷತ್ ಸದಸ್ಯ ವೈ.ಆರ್. ಸದಾಶಿವ ರೆಡ್ಡಿ ಅವರ ಮೇಲಿನ ಹಲ್ಲೆ ಖಂಡಿಸಿ ಮೌನ ಪ್ರತಿಭಟನೆ ನಡೆಸಿದ್ದೇವೆ. ಕಾನೂನು ರಕ್ಷಣೆ ಹೊಣೆ ಹೊತ್ತ ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ತಾಲೂಕು ವಕೀಲರ ಸಂದ ಉಪಾಧ್ಯಕ್ಷ ಮೋಹನ್ಕುಮಾರ್ ಮಾತನಾಡಿ, ವಕೀಲರು ಸಮಾಜ ಸೇವೆ ಮಾಡುವವರು. ನಮಗೆ ಯಾವುದೇ ಭದ್ರತೆ ಇಲ್ಲ. ವಕೀಲರ ಕಾಯ್ದೆಯು ಜಾರಿಗೆ ಬಂದಿದೆ. ವಕೀಲರಿಗೆ ಸೂಕ್ತ ಭದ್ರತೆ ಮತ್ತು ಸುರಕ್ಷತೆ ಸಿಗಬೇಕಿದೆ. ಸದಾಶಿವ ರೆಡ್ಡಿ ಕಚೇರಿಗೆ ಖಾಸಗಿ ವ್ಯಕ್ತಿಯೊಬ್ಬರು ಅವರ ಯಾವುದೇ ಪ್ರಕರಣ ಇಲ್ಲದಿದ್ದರೂ ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದರು.
ವಕೀಲ ಸಂದ ನಿರ್ದೇಶಕರಾದ ಆನಂದ್, ವೆಂಕಟೇಗೌಡ, ಮನುಗೌಡ, ವನರಾಜು, ಸಿದ್ದಗಂಗಮ್ಮ, ವಸಂತ್ಕುಮಾರ್, ವಕೀಲರಾದ ಎನ್.ಎಲ್.ಸುರೇಶ್, ತೌಡಸ್ಕರ್, ಬಿ.ಎ.ದೀಲಿಪ್ಕುಮಾರ್, ಎನ್.ಸತೀಶ್, ಯಲಚಗೆರೆರು, ಕಿರಣ್ಕುಮಾರ್, ಗಂಗಾಧರ್ ಮತ್ತಿತರರು ಭಾಗವಹಿಸಿದ್ದರು.