ತಲಕಾವೇರಿಯಲ್ಲಿ ಲಕ್ಷ್ಮಣ್ ಪೂಜೆ

Laxman Puja at Talakaveri
Published on

ಮಡಿಕೇರಿ:

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಮಂಗಳವಾರ ಮಾತೆ ಕಾವೇರಿಗೆ ಪೂಜೆ ಸಲ್ಲಿಸುವ ಮೂಲಕ ಕೊಡಗಿನಲ್ಲಿ ಪ್ರಚಾರ ಕಾರ್ಯ ಆರಂಭಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಗೆದ್ದರೆ ಕೊಡಗಿನ ಪ್ರವಾಸೋದ್ಯಮದ ವಿಶೇಷ ಅಭಿವೃದ್ಧಿ ಮಾಡಲಾಗುವುದು. ಕ್ಷೇತ್ರದ ಎಲ್ಲಾ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುವುದು. ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕರು ತಲಾ ೩೫೦ ಕೋಟಿ ಅನುದಾನ ತಂದು ಕೊಡಗಿನ ಅಭಿವೃದ್ಧಿ ಮಾಡುತ್ತಿದ್ದಾರೆ.

ಮೈಸೂರು -ಕೊಡಗು ಲೋಕಸಭಾ ಕ್ಷೇತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲಾಗಿ ತೆಗೆದುಕೊಂಡಿದ್ದಾರೆ. ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದರು.

ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ತೆನ್ನೀರ ಮೈನಾ, ಹೆಚ್.ಎಸ್. ಚಂದ್ರಮೌಳಿ, ಕೆ.ಕೆ. ಮಂಜುನಾಥ ಕುಮಾರ್ ಮತ್ತಿತರರು ಈ ಸಂದರ್ಭ ಇದ್ದರು.
ತಲಕಾವೇರಿಯಲ್ಲಿ ಪೂಜೆ ಮುಗಿಸಿ ಮಡಿಕೇರಿಗೆ ಆಗಮಿಸಿದ ಲಕ್ಷ್ಮಣ್, ಇಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net