

ಲಕ್ಷೆ್ಮೕಶ್ವರ: ಪಟ್ಟಣದ ಇಂದಿರಾ ಕ್ಯಾಂಟಿನ್ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದಲ್ಲಿ ಶನಿವಾರ ಇಂದಿರಾ ಕ್ಯಾಂಟಿನ್ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಕ್ಯಾಂಟಿನ್ನಲ್ಲಿ ಇಂದಿರಾಗಾಂಧಿ ಭಾವಚಿತ್ರ ಸರಿಯಾಗಿ ಕಾಣಿಸಬೇಕು. ಸೇವೆ ಶುರುವಾದ ಬಳಿಕ ಶುಚಿತ್ವ ಕಾಪಾಡಬೇಕು. ಸರಿಯಾಗಿ ನಿರ್ವಹಣೆ ಮಾಡಬೇಕು ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ಅವರಿಗೆ ಸೂಚಿಸಿದರು.
ಮುಖ್ಯಾಧಿಕಾರಿ ಮಹೇಶ ಹಡಪದ, ಕ್ಯಾಂಟೀನ್ ಕಾಮಗಾರಿ ಶೇ. 90ರಷ್ಟು ಮುಗಿದಿದೆ. ನೆಲಕ್ಕೆ ಕಾಂಕ್ರೀಟ್ ಹಾಕುವುದು, ಗೋಡೆ ನಿರ್ಮಾಣ ಮುಗಿದಿದೆ. ಉಳಿದ ಕೆಲಸ ಬೇಗ ಮಾಡಿ ಆದಷ್ಟು ಬೇಗ ಜನರ ಉಪಯೋಗಕ್ಕೆ ಸಮರ್ಪಿಸಲಾಗುವುದು ಎಂದರು.
ಪುರಸಭೆ ಸದಸ್ಯ ಪ್ರವೀಣ ಬಾಳಿಕಾಯಿ, ಮಹೇಶ ಹೊಗೆಸೊಪ್ಪಿನ ಮಾತನಾಡಿ, ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಪರೀತವಾಗಿದೆ. ಅದಕ್ಕೆ ಪರಿಹಾರ ಒದಗಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ಇದಕ್ಕೆ ಪುರಸಭೆ ಅಧ್ಯಕ್ಷ ಯಲ್ಲವ್ವ ದುರಗಣ್ಣನವರ, ಉಪಾಧ್ಯಕ್ಷ ಫಿದೋಸ್ ಅಡೂರ ಹಾಗೂ ಹಿರಿಯ ಸದಸ್ಯರು ಕೂಡ ದನಿಗೂಡಿಸಿದರು.
ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ಪುರಸಭೆ ಸದಸ್ಯ ಬಸವರಾಜ ಓದುನವರ, ಮುಸ್ತಾಕ್ ಅಹ್ಮದ ಶಿರಹಟ್ಟಿ, ಸಿಕಂದರ್ ಕಣಕೆ, ಪುರಸಭೆ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್, ಗುರುನಾಥ ದಾನಪ್ಪನವರ, ಚನ್ನಪ್ಪ ಜಗಲಿ, ರಫೀಕ ಕಲಬುರ್ಗಿ, ದೀಪಕ ಲಮಾಣಿ, ಫಕೀರೇಶ ನಂದೆಣ್ಣನವರ, ದಾದಾಪೀರ ಮುಚ್ಚಾಲೆ, ಅಣ್ಣಪ್ಪ ರಾಮಗೇರಿ, ತಿಪ್ಪಣ್ಣ ಸಂಶಿ, ಸಿದ್ದು ದುರಗಣ್ಣವರ ಇತರರು ಇದ್ದರು.