ಕ್ಷೇತ್ರದ ರಸ್ತೆ ಅಭಿವೃದ್ದಿಗೆ ಅನುದಾನ ನೀಡಿ

21 LXR - MLA-BALAKRISHNA
Published on

ಲಕ್ಷೆ್ಮೕಶ್ವರ: ಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ಮತ್ತು ಅನೇಕ ಪ್ರಮುಖ ಸಂಪರ್ಕ ರಸ್ತೆಗಳು, ಸೇತುವೆಗಳು ಹಾಳಾಗಿವೆ. ಇದರಿಂದ ಜನರಿಗೆ ತೊಂದರೆ ಉಂಟಾಗಿದೆ. ರಸ್ತೆ ಸುಧಾರಣೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಅವರು ಬೆಂಗಳೂರಿನಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಸಿ. ಬಾಲಕೃಷ್ಣ ಅವರಿಗೆ ಮನವಿ ಮಾಡಿದರು.

ಮತಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಗ್ರಾಮಗಳ ಸಂಪರ್ಕ ರಸ್ತೆ ಹಾಗೂ ಸೇತುವೆಗಳು ತುಂಬಾ ಹಾಳಾಗಿದ್ದು, ರೈತರಿಗೆ ಹೊಲಗಳಿಗೆ ತೆರಳಲು ಆಗುತ್ತಿಲ್ಲ. ಹೀಗಾಗಿ, ಕೂಡಲೇ ಅನುದಾನ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ನಿಗಮದ ಅಧ್ಯಕ್ಷರು ಆದಷ್ಟು ಬೇಗ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net