

ಮೈಸೂರು: ದೇವರಾಜ ಅರಸು ಪ್ರತಿಮೆ ಹೋರಾಟ ಸಮಿತಿ ನಡೆಸಿದ ಹೋರಾಟದ ಫಲವಾಗಿ ಫೆ.19ರಂದು ಬೆಳಗ್ಗೆ 9.30ಕ್ಕೆ ನಗರದ ನೂತನ ಡಿಸಿ ಕಚೇರಿ ಆವರಣದಲ್ಲಿ ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಲಾಗುತ್ತಿದೆ ಎಂದು ಸಮಿತಿ ಅಧ್ಯಕ್ಷ ಜಾಕೀರ್ ಹುಸೇನ್ ತಿಳಿಸಿದರು.
ದೇವರಾಜ ಅರಸು ಅವರ ಕಾರ್ಯಕ್ರಮಗಳ ಪ್ರಯೋಜನವನ್ನು ಕೋಟ್ಯಂತರ ಜನರು ಪಡೆದಿದ್ದಾರೆ. ಹೀಗಾಗಿ ಇವರ ನೆನಪು ಮುಂದಿನ ಪೀಳಿಗೆಗೂ ಉಳಿಯಬೇಕೆಂಬ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಮೆ ನಿರ್ಮಿಸಬೇಕೆಂದು ಸಮಿತಿ ಹೋರಾಟ ನಡೆಸಿತ್ತು. ಇದರ ಫಲವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಖಂಡರಾದ ಎಂ.ಚಂದ್ರಶೇಖರ್, ಡಾ.ವೈ.ಡಿ.ರಾಜಣ್ಣ, ಡೇರಿ ವೆಂಕಟೇಶ್ ಇದ್ದರು.