ಆಲಸ್ಯವೇ ಮನುಷ್ಯನ ದೊಡ್ಡ ಶತ್ರು

09sunti 01
ಸರ್ಕಾರಿ ಪದವಿ ಕಾಲೇಜಿನ ವಾರ್ಷಿಕೋತ್ಸವ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭದಲ್ಲಿ ಕವಿತಾ, ಸುನಿತಾ ಸೇರಿದಂತೆ ಇತರ ಗಣ್ಯರು ಪಾಲ್ಗೊಂಡಿದ್ದರು.
Published on

ಸುಂಟಿಕೊಪ್ಪ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2023-24 ನೇ ಸಾಲಿನ ವಾರ್ಷಿಕೋತ್ಸವ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ಶುಕ್ರವಾರ ನಡೆಯಿತು.

ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಪ್ರಭಾರ ಪ್ರಾಂಶುಪಾಲರಾದ ಕವಿತಾ ಉದ್ಘಾಟಿಸಿದರು. ಸಾಧಕರ ಜೀವನವನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾರ್ಥಿಗಳು ನಿರ್ಧಿಷ್ಟ ಗುರಿಯೊಂದಿಗೆ ಸಾಧನೆ ಮಾಡಬೇಕೆಂದು ಅವರು ಹೇಳಿದರು. ಆಲಸ್ಯವೇ ಮನುಷ್ಯನ ದೊಡ್ಡ ಶತ್ರು. ಸೋಮಾರಿಗಳಾಗಿ ಕಾಳಕಳೆದು ವಿದ್ಯಾರ್ಥಿ ಜೀವನವನ್ನು ವ್ಯರ್ಥ ಮಾಡಿಕೊಳ್ಳಬಾರದು ಎಂದು ಸಲಹೆ ನೀಡಿದರು.

ಉಪನ್ಯಾಸಕಿ ಸುನಿತಾ ಮಾತನಾಡಿ, ಸೂತ್ರವಿಲ್ಲದ ಗಾಳಿಪಟ ಮೇಲೆರಲು ಹೇಗೆ ಸಾಧ್ಯವಿಲ್ಲವೋ ಅದೇರೀತಿ ಗುರಿಯಿಲ್ಲದ ವಿದ್ಯಾರ್ಥಿಯ ಸಾಧನೆ ಮಾಡಲು ಸಾಧ್ಯವಿಲ್ಲ. ಪಾಲಕರ ಆಶಯಗಳನ್ನು ಈಡೇರಿಸುವ ಜವಬ್ದಾರಿ ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ಉತ್ತಮ ಗುಣ ಮೈಗೂಡಿಸಿಕೊಂಡು ದೇಶದ ಉತ್ತಮ ಪ್ರಜೆಯಾಗಿ ದೇಶಸೇವೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿವಿಧ ಆಟೋಟಗಳನ್ನು ಏರ್ಪಡಿಸಿದ್ದರು. ವಿಜೇತರಿಗೆ ಕಾಲೇಜಿನ ಗಣಿತ ಉಪನ್ಯಾಸಕಿ ಕವಿತಾಭಕ್ತ್, ಪದ್ಮಾವತಿ ಹಾಗೂ ಸರಳಾ ಬಹುಮಾನಗಳನ್ನು ವಿತರಿಸಿದರು. ರಿಶಾನಾ, ನಿಶ್ಚಿತಾ ಮತ್ತು ಜೊಶ್ವಾರವಿ, ಸೌಂದರ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net