

ಬೆಳಗಾವಿ: ಇಲ್ಲಿನ ಮಹಾಂತೇಶ ನಗರದಲ್ಲಿ ಯುವಕನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳಮಾರುತಿ ಠಾಣೆ ಪೊಲೀಸರು ಗುರುವಾರ ಮೂವರನ್ನು ಬಂಧಿಸಿದ್ದಾರೆ.
ನಗರದ ಅಮೀರ್ ಕಿತ್ತೂರು (27), ವೇದಾ (29), ಜಬೀಬ್(29) ಬಂಧಿತರು. ಬುಧವಾರ ರಾತ್ರಿ ಮಹಾಂತೇಶ ನಗರದಲ್ಲಿರುವ ಸ್ನೇಹಿತೆ ಸ್ಮೀತಾ ಎಂಬುವವರ ಮನೆಗೆ ಊಟಕ್ಕೆ ಹೋಗಿರುವ ಸಂದರ್ಭದಲ್ಲಿ ಟಿಳಕವಾಡಿಯ ದ್ವಾರಕಾನಗರದ ಪ್ರಣಿತ್ ಕುಮಾರ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದರಿಂದ ತೀವ್ರಗಾಯಗೊಂಡ ಪ್ರಣಿತ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಬೆನ್ನತ್ತಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.