ಹಣ ಕೊಟ್ಟವರಿಗೆ ಪ್ರತಿಪಕ್ಷ ನಾಯಕ ಸ್ಥಾನ; ಶಾಸಕ ವಿನಯ ಕುಲಕರ್ಣಿ ವ್ಯಂಗ್ಯ

web 3
Published on

ಧಾರವಾಡ: ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಗೆ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುತ್ತಿಲ್ಲ. ಆ ಸ್ಥಾನವನ್ನು ಹಣ ಕೊಟ್ಟವರಿಗೆ ನೀಡಬಹುದು ಎಂದು ಶಾಸಕ ವಿನಯ ಕುಲಕರ್ಣಿ ವ್ಯಂಗ್ಯವಾಡಿದರು.
ಸವದತ್ತಿಯಲ್ಲಿ ಶನಿವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಽವೇಶನ ಆರಂಭವಾಗಿದ್ದರೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮÁಡಲಾಗದ ಬಿಜೆಪಿ ಶಾಸಕರು ಸದನದ ಬಾವಿಗೆ ಇಳಿದು ಕಾಂಗ್ರೆಸ್ ಸರ್ಕಾರ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಸಾಕಾರ ಮÁಡಲು ಆಗುತ್ತಿಲ್ಲ ಎಂದು ಧರಣಿ ಮÁಡಿರುವುದು ಹಾಸ್ಯಾಸ್ಪದ ಎಂದರು.
ಈ ಬಾರಿ ರಾಜ್ಯದ ಜನ ನಮಗೆ ಬಹುಮತ ನೀಡಿದ್ದಾರೆ. ಕಳೆದ ಬಾರಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದ ದುರಾಡಳಿತ ಇದಕ್ಕೆ ಕಾರಣ. ಚುನಾವಣೆಗೂ ಮೊದಲು ಕಾಂಗ್ರೆಸ್ ಘೋಷಿಸಿದ್ದ ಎಲ್ಲ ಗ್ಯಾರಂಟಿಗಳನ್ನು ಜನರಿಗೆ ತಲುಪಿಸಲಾಗುವುದು. ಇದು ನಮ್ಮ ಜವಾಬ್ದಾರಿ ಕೂಡ. ಅನ್ನಭಾಗ್ಯ ಯೋಜನೆಯಡಿ ೫ ಕೆ.ಜಿ. ಅಕ್ಕಿ ಹಾಗೂ ೫ ಕೆ.ಜಿ. ಅಕ್ಕಿಯ ಹಣ ನೀಡುವ ನಿರ್ಧಾರವನ್ನು ಜನ ಸ್ವಾಗತಿಸಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮÁಡುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net