

ಯಲಹಂಕ: ಯಲಹಂಕ ಕ್ಷೇತ್ರದ ಕಸಘಟ್ಟಪುರ ಗ್ರಾ.ಪಂ.ಹಾಲಿ ಅಧ್ಯಕ್ಷೆ ಸಂಧ್ಯಾ ದೇವರಾಜ್, ಗ್ರಾ.ಪಂ.ಸದಸ್ಯೆ ಸುಪ್ರಿಯಾ ಮೇರಿ, ಮುಖಂಡರಾದ ಚಿನ್ನಪ್ಪ ಹಾಗೂ ಅವರ ಬೆಂಬಲಿಗರು ಶಾಸಕ ಎಸ್.ಆರ್. ವಿಶ್ವನಾಥ್ ಸಮ್ಮುಖದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದರು.
ಈ ವೇಳೆ ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ಸಂಧ್ಯಾ ದೇವರಾಜ್ ಅವರು ಸುಶಿಕ್ಷಿತರಾಗಿದ್ದು, ಬಿಜೆಪಿ ತತ್ವ ಸಿದ್ಧಾಂತವನ್ನು ಒಪ್ಪಿ ಅವರ ಬೆಂಬಲಿಗರೊಂದಿಗೆ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂತೋಷ ಉಂಟು ಮಾಡಿದೆ. ನಾವೆಲ್ಲರೂ ಸೇರಿ ಯಲಹಂಕ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಇನ್ನೂ ಹೆಚ್ಚು ಸದೃಢವಾಗಿ ಕಟ್ಟುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸೋಣ ಎಂದರು.
ಇದೇ ಸಂದರ್ಭದಲ್ಲಿ ಯಲಹಂಕ ಗ್ರಾ.ಮಂಡಲ ಬಿಜೆಪಿ ಅಧ್ಯಕ್ಷ ಎಂ.ಜಿ.ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ವಿಶ್ವನಾಥಪುರ ಮಂಜುನಾಥ್, ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಚೊಕ್ಕನಹಳ್ಳಿ ವೆಂಕಟೇಶ್, ಕಸಘಟ್ಟಪುರ ಗ್ರಾ.ಪಂ.ಮಾಜಿ ಅಧ್ಯಕ್ಷ ಕಿರಣ್ ಕುಮಾರ್,ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಯಲಹಂಕ ಗ್ರಾ.ಮಂಡಲ ರೈತ ಮೋರ್ಚಾ ಅಧ್ಯಕ್ಷ ಎಚ್.ಸಿ.ರಾಜೇಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಮಹೇಂದ್ರ, ಬಿಜೆಪಿ ಮುಖಂಡರಾದ ಕೆ.ಸಿ.ಬಾಬು, ಕುಂಬಾರಹಳ್ಳಿ ಆನಂದ್ ಸೇರಿದಂತೆ ಇನ್ನಿತರರಿದ್ದರು.