

ವಿಜಯವಾಣಿ ಸುದ್ದಿಜಾಲ ಹಳೆಯಂಗಡಿ
ವಿದ್ಯಾರ್ಥಿಗಳ ಸ್ವಾವಲಂಬನೆ ಹಾಗೂ ನಾಯಕತ್ವ ಗುಣಗಳ ಅಭಿವೃದ್ಧಿಗೆ ರಾಷ್ಟ್ರೀಯ ಸೇವಾ ಯೊಜನಾ ಶಿಬಿರಗಳು ಪೂರಕ. ವಿದ್ಯಾರ್ಥಿಗಳು ಮೊಬೈಲ್, ಸಾಮಾಜಿಕ ಜಾಲತಾಣದಿಂದ ದೂರವಿದ್ದು, ಕೃಷಿ ಹಾಗೂ ಶಿಕ್ಷಣಕ್ಕೆ ಮಹತ್ವ ನೀಡಬೇಕು ಎಂದು ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಎಸ್.ಪೂಜಾರಿ ಹೇಳಿದರು.
ತೋಕೂರು ಹಿಂದುಸ್ತಾನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಸುರತ್ಕಲ್ ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್ ಅಧ್ಯಕ್ಷತೆ ವಹಿಸಿದ್ದರು. ಪಡುಪಣಂಬೂರು ಗ್ರಾ.ಪಂ. ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಸದಸ್ಯ ಹೇಮನಾಥ ಅಮೀನ್, ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಎಚ್.ವಿ.ರಾಘವೇಂದ್ರ, ತೋಕೂರು ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿದಾಸ್ ಭಟ್, ತೋಕೂರು ಯುವಕ ಸಂಘದ ಅಧ್ಯಕ್ಷ ರಮೇಶ್ ದೇವಾಡಿಗ, ಶ್ರೀ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಸುವರ್ಣ, ಪ್ರಾಂಶುಪಾಲೆ ಲಕ್ಷ್ಮೀ ಪಿ., ಯೋಜನಾಧಿಕಾರಿ ಚೈತ್ರಾ ಶೆಟ್ಟಿ, ತೋಕೂರು ಶಾಲಾ ಮುಖ್ಯಶಿಕ್ಷಕಿ ವನಿತಾ, ಘಟಕದ ನಾಯಕರಾದ ಭುವನ್ ನವೀನ್ ಪೂಜಾರಿ, ತೇಜಸ್ವಿ ಕರ್ಕೇರ ಉಪಸ್ಥಿತರಿದ್ದರು. ಪ್ರಮೀತ್ ಕಾರ್ಯಕ್ರಮ ನಿರೂಪಿಸಿದರು.