ಕೆಲಸ ಮಾಡಲು ನಾಯಕತ್ವ, ತಾಳ್ಮೆ ಮುಖ್ಯ

28arsph2ep
????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on


ಅರಸೀಕೆರೆ ಗ್ರಾಮಾಂತರ : ಯಾವುದೇ ಒಂದು ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವಾಗ ನಾಯಕತ್ವ ವಹಿಸಬೇಕಾದರೆ ಸಂಘಟನೆ ಮತ್ತು ತಾಳ್ಮೆ ಎರಡು ಮುಖ್ಯ ಎಂದು ಮಾಲೆಕಲ್ ತಿರುಪತಿ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯ ವ್ಯವಸ್ಥಾಪನ ಸಮಿತಿ ಸದಸ್ಯೆ ಜಯಶ್ರೀ ಅಭಿಪ್ರಾಯಪಟ್ಟರು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬಂಜಾರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಇಂದು ಸಾವಿರಾರು ಕುಟುಂಬಗಳು ಜೀವನ ಕಟ್ಟಿಕೊಂಡಿದೆ. ಕುಟುಂಬದ ಆರ್ಥಿಕ ನಿರ್ವಹಣೆಯಲ್ಲಿ ಸಂಘ ಪ್ರಮುಖ ಪಾತ್ರ ವಹಿಸಿದೆ ಎಂದರು.

ತಾಲೂಕು ಯೋಜನಾಧಿಕಾರಿ ಅಕ್ಷತಾ ರೈ, ಕರ್ನಾಟಕ ಬ್ಯಾಂಕ್ ಹಾಸನ ಕ್ಲಸ್ಟರ್ ಮುಖ್ಯಸ್ಥ ಉಮೇಶ್ ಭಟ್, ಜಿಲ್ಲಾ ನಿರ್ದೇಶಕ ಮಮತಾ ಮಾತನಾಡಿದರು. ಅರಸೀಕೆರೆ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಸುಮಂತ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net