ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಾಯಕತ್ವ ತರಬೇತಿ

blm (1)
Published on

ಕಾರ್ಕಳ: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸವಾಲೋಚನ ಟಕ, ಎಂ.ಆರ್.ಪೈ ಫೌಂಡೇಶನ್ ಮತ್ತು ಮುಂಬೈನ ಫೋರಂ ಆಫ್ ಫ್ರೀ ಎಂಟರ್‌ಪ್ರೈಸರ್ಸ್ ಸಹಯೋಗದೊಂದಿಗೆ ಇಂಜಿನಿಯರಿಂಗ್, ಎಂಬಿಎ, ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸ್‌ನ ವಿದ್ಯಾರ್ಥಿಗಳಿಗಾಗಿ ಎರಡು ದಿನಗಳ ನಾಯಕತ್ವ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು. ಎಂ.ಆರ್.ಪೈ ಫೌಂಡೇಶನ್‌ನ ಟ್ರಸ್ಟಿ ಗೀತಾ ಪೈ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸ್ವಾತಿಕ ಪಾಡಿಯಾ, ಎಂ.ಆರ್.ಪೈ ಫೌಂಡೇಶನ್ ತರಬೇತುದಾರ ಸಚಿನ್ ಕಾಮತ್ ಮತ್ತು ವಿವೇಕ್ ಪಟ್ಕಿ, ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ಡಾ.ರಾಧಾಕೃಷ್ಣ ಎಸ್.ಐತಾಳ್, ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಪ್ರಾಧ್ಯಾಪಕಿ ಅಕ್ಷಿತಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net