ಕನ್ನಡ ಭಾಷೆ, ಸಾಹಿತ್ಯ, ಪರಂಪರೆ ಅರಿಯಿರಿ

09 09 205_BNG_RURAL_PAGE_5B
ಎಸ್​.ಎಸ್​.ಎಲ್​.ಸಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳು ಪಡೆದ ವಿದ್ಯಾರ್ಥಿಗಳಿಗೆ ದೊಡ್ಡಬಳ್ಳಾಪುರದ ಡಾ.ರಾಜ್​ ಕುಮಾರ್​ ಕಲಾಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್​ನಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್​.ರವಿಕಿರಣ್​, ಸಂಟನಾ ಕಾರ್ಯದರ್ಶಿ ರಾಜಟ್ಟ ರವಿ, ಸ್ಕೌಟ್ಸ್​ ಮತ್ತು ಗೈಡ್ಸ್​ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ರಂಗಭೂಮಿ ಕಲಾವಿದೆ ಪುಷ್ಪಾಮೋಹನ್​, ತಾಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್​, ಗೌರವ ಕಾರ್ಯದರ್ಶಿ ಎ.ಜಯರಾಮ್​, ಸಂಟನಾ ಕಾರ್ಯದರ್ಶಿ ಆರ್​.ಗೋವಿಂದರಾಜು ಇದ್ದರು.
Published on

ದೊಡ್ಡಬಳ್ಳಾಪುರ : ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸತಿಕ ಪರಂಪರೆಯ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿಯಬೇಕಾಗಿದೆ ಎಂದು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೋದಂಡರಾಮ ತಿಳಿಸಿದರು. ಎಸ್​.ಎಸ್​.ಎಲ್​.ಸಿ ಪರೀೆಯಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳು ಪಡೆದ ವಿದ್ಯಾರ್ಥಿಗಳಿಗೆ ನಗರದ ಡಾ.ರಾಜ್​ ಕುಮಾರ್​ ಕಲಾಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. ಜಗತ್ತಿನ ಪ್ರಮುಖ ಭಾಷೆಗಳಲ್ಲಿ ಕನ್ನಡ ಭಾಷೆ ಪ್ರಾಚಿನ ಮತ್ತು ಅನನ್ಯತೆಯಲ್ಲಿ ಮಹತ್ವದ ಸ್ಥಾನ ಪಡೆದಿದೆ. ಕನ್ನಡ ಸಾಹಿತ್ಯವು ಭಾಷಾ ವೈಭವದೊಂದಿಗೆ, ಕನ್ನಡ ನಾಡಿನ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ. ಕಾವ್ಯ, ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಭಾವಗೀತೆ ಮುಂತಾದ ವಿವಿಧ ಪ್ರಕಾರಗಳಲ್ಲಿ ಕನ್ನಡ ಸಾಹಿತ್ಯ ಸಮೃದ್ಧವಾಗಿದೆ ಎಂದರು.

ಕನ್ನಡ ಭಾಷೆ ಮತ್ತು ಸಾಹಿತ್ಯದ ಓದು ಪಠ್ಯಪುಸ್ತಕಗಳಿಗಷ್ಟೇ ಸೀಮಿತವಾಗಬಾರದು. ವಿದ್ಯಾರ್ಥಿಗಳು ಕನ್ನಡ ಕಾವ್ಯದ ರಸವನ್ನು ಗ್ರಹಿಸುವ ಶಕ್ತಿ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಸಾಹಿತ್ಯದ ಓದು ಜೀವನಕ್ಕೆ ಬಹಳ ಮುಖ್ಯ. ಸಾಹಿತ್ಯದಿಂದ ಮಾನಸಿಕ ನೆಮ್ಮದಿ ಪಡೆಯಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಪುಸ್ತಕ ಪ್ರೀತಿಯನ್ನು ಬೆಳೆಸಿಕೊಳ್ಳಬೇಕೆಂದರು. ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್​.ಹೆಗಡೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಅಭಿರುಚಿ ಬೆಳೆಸುವಲ್ಲಿ ಶಿಕ್ಷಕರು, ಪೋಷಕರು ಮಹತ್ವದ ಪಾತ್ರವಹಿಸಬೇಕಾಗಿದೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯ ಅಭಿಮಾನ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕಾಗಿದೆ. ಕನ್ನಡ ಬಳಸಿದಾಗ ಮಾತ್ರ ಕನ್ನಡವನ್ನು ಉಳಿಸಿ, ಬೆಳೆಸಲು ಸಾಧ್ಯವೆಂದರು.

ಬಿಹಾರದ ಗರೀಮಾಗೆ ಕನ್ನಡದಲ್ಲಿ 125ಕ್ಕೆ 125 : ವಿದ್ಯಾರ್ಥಿನಿ ಗರೀಮಾ ಕುಮಾರಿ ತಾಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಎಸ್​ಎಸ್​ಎಲ್​ಸಿ ಪರೀೆಯ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿದ್ದಾರೆ. ಗರೀಮಾ ಕುಮಾರಿ ಪಾಲಕರು ಬಿಹಾರ ರಾಜ್ಯದಿಂದ ಉದ್ಯೋಗಕ್ಕಾಗಿ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಬಂದಿದ್ದಾರೆ. ಇವರ ಮನೆಯ ಭಾಷೆ ಹಿಂದಿಯಾದರೂ, ಗರೀಮಾ ಕುಮಾರಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿರುವುದು ಗಮನ ಸೆಳೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net