ಕಿರಗೂರು ಶಾಲೆಯಲ್ಲಿ ಕಲಿಕಾ ಹಬ್ಬ

ಕಿರಗೂರು ಶಾಲೆಯಲ್ಲಿ ಕಲಿಕಾ ಹಬ್ಬ
Published on

ಗೋಣಿಕೊಪ್ಪಲು: ಪೊನ್ನಂಪೇಟೆಯ ಕಿರಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಕ್ಲಸ್ಟರ್‌ನ ಕಲಿಕಾ ಹಬ್ಬ ಕಾರ್ಯಕ್ರಮ ನಡೆಯಿತು.

ಪೊನ್ನಂಪೇಟೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಜೀವನ್‌ನೇತೃತ್ವದಲ್ಲಿ ಕಲಿಕಾ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಿರಗೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಿ.ಕೆ.ಸುನೀತಾ ಧ್ವಜಾರೋಹಣ ನೆರವೇರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಕಾವೇರಮ್ಮ, ಎಸ್‌ಡಿಎಂಸಿ ಅಧ್ಯಕ್ಷ ರಮೇಶ್, ಉಪಾಧ್ಯಕ್ಷ ಹರೀಶ್, ಶಿಕ್ಷಣ ಸಂಯೋಜಕ ಕೆ.ಆರ್.ವಿಶಾಲಾಕ್ಷಮ್ಮ, ಆಲೆಮಾಡ ಸನ್ನು ಪೂವಯ್ಯ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕವಿತಾ ತಮ್ಮಯ್ಯ, ಸಮೂಹ ಸಂಪನ್ಮೂಲ ವ್ಯಕ್ತಿ ಅನಿತಾಕುಮಾರಿ, ಸೌಮ್ಯಾ, ಮುರುಗನ್, ರಾಧಾ, ವೆಂಕಟೇಶ್, ಶಿಲ್ಪಾ, ಭವ್ಯಾ, ಹಿರಿಯ ವಿದ್ಯಾರ್ಥಿ ಪ್ರತಾಪ್, ಲಾರೆನ್ಸ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net