

ಮೈಸೂರು: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ ಮಕ್ಕಳು ಹೆಚ್ಚು ಪ್ರತಿಭಾವಂತರಾಗಿದ್ದು, ಅವರಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಅವರಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ತಿಳಿಸಿದರು.
ಮೈಸೂರು ತಾಲೂಕು ಲಿಂಗದೇವರ ಕೊಪ್ಪಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಎಫ್‌ಎಲ್‌ಎನ್. ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರತೆಗೆಯಲು ಕಲಿಕಾ ಹಬ್ಬ ಆಚರಣೆ ಉತ್ತಮ ವೇದಿಕೆಯಾಗಿದೆ. ಆದ್ದರಿಂದಲೇ ಸರ್ಕಾರ ಕಲಿಕಾ ಹಬ,್ಬ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ಇಲವಾಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಣ್ಣ ಮಾತನಾಡಿ, ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳಿಗೆ ಗ್ರಾಮಸ್ಥರು ಹಾಗೂ ಶಿಕ್ಷಕರ ಸಹಕಾರವಿದ್ದರೆ ಯಶವಾಗಲು ಸಾಧ್ಯ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ರಾಜು ಸಮಾಜ ಸೇವಕ ಎಲ್.ಎಸ್. ಗಾಂಧಿಕುಮಾರ್, ಇಲವಾಲ ಕ್ಲಸ್ಟರ್‌ನ ಎಲ್ಲ್ಲ ಶಾಲೆಗಳ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಪೋಷಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಇದ್ದರು.