

ಹುಕ್ಕೇರಿ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಒಟ್ಟಿಗೆ ಸೇರಿಸಿ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ ಮಾಡಿದಾಗ ಮಕ್ಕಳು ಕಲಿಕೆಯತ್ತ ಆಸಕ್ತಿ ತೋರುತ್ತಾರೆಂದು ಕ್ಷೇತ್ರ ಸಮನ್ವಯಾಧಿಕಾರಿ ಎ.ಎಸ್.ಪದ್ಮಣ್ಣವರ ಹೇಳಿದರು.
ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕ್ಲಷ್ಟರಮಟ್ಟದ ಮಕ್ಕಳ ಕಲಿಕಾ ಹಬ್ಬದಲ್ಲಿ ಮಾತನಾಡಿ, ಕಲಿಕಾ ಹಬ್ಬ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು.
ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ವಿನಾಯಕ ನಾಯಿಕ ಮಾತನಾಡಿ, ಕಲಿಕೆಯನ್ನು ಲಪ್ರದಗೊಳಿಸಲು ಶಿಕ್ಷಣ ಇಲಾಖೆ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಿಳಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಮಹ್ಮದರಫೀಕ್ ಮುಜಾವರ ಉದ್ಘಾಟಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಎಸ್‌ಡಿಎಂಸಿ ಉಪಾಧ್ಯಕ್ಷ ಇಸ್ಮಾಯಿಲ್ ಮಕನಾದಾರ, ಸದಸ್ಯರಾದ ರಮಜಾನ್ ಮುಜಾವರ, ಹೈದರಲಿ ಮೊಮಿನದಾದಾ, ಇರ್ಪಾನ್ ಪೀರಜಾದೆ, ಬೀಬಿತಬಸುಮ್ ಪೀರಜಾದೆ ಇತರರಿದ್ದರು.