ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಲಿಕಾಮೃತ

17
Published on

ಮೈಸೂರು: ಕಲಿಕೆಯಲ್ಲಿ ಹಿಂದುಳಿದಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸೋಮವಾರ ಕಲಿಕಾಮೃತ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಗರದ ಹಾರ್ಡ್ವಿಕ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ 168 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ.ಜವರೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನದ ಚಿತ್ರಗಳನ್ನು ಸುಲಭವಾಗಿ ಬಿಡಿಸುವುದನ್ನು ತಿಳಿಸಿದರು. ಅಲ್ಲದೇ ಪ್ರತಿ ದಿನ ಪಠ್ಯ ಓದುವುದಲ್ಲದೇ ಬರೆಯುವುದರಿಂದ ಅದು ನೆನಪಿನಲ್ಲಿ ಉಳಿಯುತ್ತದೆ ಎಂದು ತಿಳಿಸಿದರು.

ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಶಿಸ್ತು ಪಾಲನೆ ಹಾಗೂ ಪರೀಕ್ಷಾ ಸಮಯದ ನಿರ್ವಹಣೆ ಕುರಿತು ಮಾಹಿತಿ ನೀಡಿದರಲ್ಲದೇ, ಕಲಿಕಾಮೃತ ಕಾರ್ಯಕ್ರಮ ಮುಗಿಯುವವರೆಗೂ ಮಧ್ಯಾಹ್ನ ಇಸ್ಕಾನ್‌ನಿಂದ ಉಪಹಾರವನ್ನು ಆಯೋಜಿಸಲಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು. ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಹಾಗೂ ಶಿಕ್ಷಣ ಸಂಯೋಜಕ ಮೋಹನ್‌ಕುಮಾರ್, ಸಂಪನ್ಮೂಲ ವ್ಯಕ್ತಿಗಳಾದ ನಾಗರಾಜು, ಸಲ್ಮಾ, ಕವಿತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net