ಕಲಿಕೆಗೆ ಪ್ರೇರಕ ಶಕ್ತಿ ಪ್ರತಿಭಾ ಕಾರಂಜಿ

Published on

ದೇವದುರ್ಗ: ಪ್ರತಿ ಮಗುವಿನಲ್ಲೂ ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸವಾರ್ಂಗೀಣ ಬೆಳವಣಿಗೆಗೆ ಅವಕಾಶ ಕಲ್ಪಿಸಬೇಕು ಎಂದು ಅನುದಾನಿತ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಯಾಟಗಲ್ ಹೇಳಿದರು.

ಪಟ್ಟಣದ ಎಸ್‌ಎಂಎಸ್ ಶಾಲೆಯಲ್ಲಿ ಆಯೋಜಿಸಿದ್ದ ದೇವದುರ್ಗ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಮಾತನಾಡಿದರು.

ಪ್ರೇರಕ ಶಕ್ತಿ

ಮಕ್ಕಳ ಕಲಿಕೆಗೆ ಪ್ರತಿಭಾ ಕಾರಂಜಿ ಪ್ರೇರಕ ಶಕ್ತಿಯಾಗಿದೆ. ಮಕ್ಕಳು ಯಾವ ಕ್ಷೇತ್ರದಲ್ಲಿ ಉತ್ತಮ ಆಸಕ್ತಿ ಹೊಂದಿದ್ದಾರೆ ಎಂಬುದನ್ನು ಗುರುತಿಸಲು ಪ್ರತಿಭಾ ಕಾರಂಜಿ ವೇದಿಕೆಯಾಗಲಿದೆ. ಇಂಥ ಕಾರ್ಯಕ್ರಮಗಳು ಮಕ್ಕಳ ಕಲಿಕೆಗೆ ಪ್ರೇರಣೆ ನೀಡಲಿವೆ.

ವಿದ್ಯಾರ್ಥಿಗಳು ಸೋಲು-ಗೆಲುವಿನ ಬಗ್ಗೆ ಯೋಚಿಸದೆ ಎಲ್ಲ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹನುಮಂತ್ರಾಯ ಶಾಖೆ, ಉಪಾಧ್ಯಕ್ಷ ಶ್ರೀಶಾಂತಗೌಡ, ಮಂಜುನಾಥ, ಖಾಸಗಿ ಶಾಲೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಶಂಕರಯ್ಯ ತಾತ, ಸುರೇಶ, ರೇವಣ ಸಿದ್ದಪ್ಪ ಪೂಜಾರಿ, ಶಿವಕುಮಾರ ಹರವಿ, ಮುಖ್ಯಶಿಕ್ಷಕ ಇಬ್ರಾಹಿಂ ಸಾಬ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net