ಧಾರ್ಮಿಕ ಕಾರ್ಯದಿಂದಲೂ ಹೊಸತನ ಕಲಿಕೆ

kapu edaneeru
ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಳದ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಎಡನೀರು ಮಠಾಧೀಶ ಸಚ್ಚಿದಾನಂದ ಭಾರತಿ ಶ್ರೀಗಳು ಆಶೀರ್ವಚನ ನೀಡಿದರು.
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಐತಿಹಾಸಿಕ ದಾಖಲೆಯಾಗಿ ಉಳಿಸುವಂತಹ ಆಲಯವನ್ನು ಭಗವಂತನು ಭಕ್ತರ ಮೂಲಕ ನಿರ್ಮಿಸಿಕೊಂಡಿದ್ದಾರೆ. ಇಲ್ಲಿನ ಧಾರ್ಮಿಕ ಕಾರ್ಯಕ್ರಮಗಳಿಂದಲೂ ಭಕ್ತರು ಹೊಸತನದ ಪಾಠ ಕಲಿಯಬಹುದು ಎಂದು ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಪ್ರತಿಷ್ಠಾಪನಾ ಬ್ರಹ್ಮ ಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ಕಲ್ಲಡ್ಕ ಪ್ರಭಾಕರ ಭಟ್ ಧಾರ್ಮಿಕ ಸಭೆ ಉದ್ಘಾಟಿಸಿ, ಮಾತನಾಡಿ, ಅಮ್ಮನ ಶಕ್ತಿ ಪ್ರೇರಣೆಯಿಂದ ನಾವು ಬೆಳೆದು ಬಂದಿದ್ದೇವೆ. ಹಿಂದುಗಳು ಪವಿತ್ರವಾದ ಭೂಮಿಯನ್ನು ಪ್ರೀತಿಯಿಂದ ಪೂಜಿಸುತ್ತೇವೆ ಎಂದರು.

ಶ್ರೀ ಕೇಮಾರು ಸಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿದರು. ಪುರುಷೋತ್ತಮ್ ಶೆಟ್ಟಿ, ಅವರನ್ನು ಗೌರವಿಸಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಡಾ.ಎಚ್.ಎಸ್ ಬಲ್ಲಾಳ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ್ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಸುಹಾಸ್ ಹೆಗ್ಡೆ, ದಿವಾಕರ್ ಶೆಟ್ಟಿ ಮಸ್ಕತ್, ಶಂಭು ಶೆಟ್ಟಿ, ಮನೋಹರ್ ಎಸ್.ಶೆಟ್ಟಿ, ದಿವಾಕರ್ ಶೆಟ್ಟಿ ಕೊಡವೂರು ಉಪಸ್ಥಿತರಿದ್ದರು. ಬ್ರಹ್ಮ ಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ಯೋಗೀಶ್ ಶೆಟ್ಟಿ ಸ್ವಾಗತಿಸಿದರು.---------------

ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ವಿಜಯ ಶೆಟ್ಟಿ ಮೂಡುಬೆಳ್ಳೆ ಹಾಗೂ ಬಳಗದಿಂದ ಭಕ್ತಿ ರಸ ಮಂಜರಿ, ವಿದ್ಯಾ ಮುರಳೀಧರ ಅವರ ಸೌರಭ ನೃತ್ಯ ಪರಿಷತ್ ಕಲಾವಿದರಿಂದ ನೃತ್ಯೋಲ್ಲಾಸ, ಕುದ್ರೋಳಿ ಗಣೇಶ್ ಮತ್ತು ಬಳಗದಿಂದ ಜಾದೂ ಪ್ರದರ್ಶನ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net