ಕಲಿಕೆ ಕಡೆಗೆ ಆಸಕ್ತಿ ತೋರುವಂತೆ ಗಮನಹರಿಸಿ

Hadagali Education
ಹೂವಿನಹಡಗಲಿಯಲ್ಲಿ ತಾಲೂಕು ಪ್ರೌಢಶಾಲಾ ಮುಖ್ಯಗುರುಗಳ ಸಂಘದಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪ್ರತಿಭಾವಂತರನ್ನು ಸನ್ಮಾನಿಸಲಾಯಿತು. ಬಿಇಒ ಮಹೇಶ್ ಪೂಜಾರ, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಶೇಖರ್ ಹೊರಪೇಟೆ, ತಾಲೂಕು ಮುಖ್ಯಗುರುಗಳು ಸಂಘದ ಅಧ್ಯಕ್ಷ ಪಿ.ಪ್ರಕಾಶ್ ಇತರರಿದ್ದರು.
Published on

ಹೂವಿನಹಡಗಲಿ: ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಯೊಂದಿಗೆ ಸಾಮಾಜಿಕ ಕಳಕಳಿಯನ್ನೂ ಮೈಗೂಡಿಸಿಕೊಳ್ಳಬೇಕು ಎಂದು ಬಿಇಒ ಮಹೇಶ್ ವಿ.ಪೂಜಾರ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಪ್ರೌಢಶಾಲಾ ಮುಖ್ಯಗುರುಗಳ ಸಂಘದಿಂದ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಸಾಧಿಸಬೇಕೆಂದಿರುವ ಗುರಿಯನ್ನು ಮರೆಯಬಾರದು. ಸತತ ಪರಿಶ್ರಮಪಟ್ಟರೆ ಮಾತ್ರ ಸಾಧನೆ ಮಾಡಲು ಸಾಧ್ಯ. ಮಕ್ಕಳನ್ನು ಉತ್ತಮ ಪ್ರಜೆಯಾಗಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಪಾಲಕರ ಮೇಲಿದೆ. ಅವರು ಕಲಿಕೆ ಕಡೆಗೆ ಆಸಕ್ತಿ ತೋರುವಂತೆ ಗಮನಹರಿಸಬೇಕು ಎಂದರು.

ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಶೇಖರ್ ಹೊರಪೇಟೆ ಮಾತನಾಡಿದರು. ಮುಖ್ಯಗುರುಗಳು ಸಂಘದ ಅಧ್ಯಕ್ಷ ಪಿ.ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಒಟ್ಟು 49 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂಪಿಎಂ ಅಶೋಕ್, ಡಯಟ್ ಉಪನ್ಯಾಸಕ ನಿಂಗಪ್ಪ, ಶಿಕ್ಷಕರ ಸಂಘಟನೆಯ ಎಂ.ಶಿವಲಿಂಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net