ಖಾಸಗಿ ಶಾಲೆ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ

20 mlv 2
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 2621440;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;
Published on


ಮಳವಳ್ಳಿ : ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಗಳನ್ನು ಹೊರತರುವ ಗಟ್ಟಿತನದ ಶಿಕ್ಷಣ ದೊರೆಯುವುದು ಸರ್ಕಾರಿ ಶಾಲೆಗಳಲ್ಲಿ ಮಾತ್ರವಾಗಿದೆ. ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹವನ್ನು ಬಿಟ್ಟು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿ ದಾಖಲಿಸುವಂತೆ ತಾಲೂಕು ಪಂಚಾಯಿತಿ ಇಒ ಶ್ರೀನಿವಾಸ್ ತಿಳಿಸಿದರು.


ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಸಮೂಹ ಸಂಪನ್ಮೂಲ ಕೇಂದ್ರದಿಂದ ತಾಲೂಕಿನ ಹಂಗ್ರಾಪುರ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಗುರುವೇ ಗೋವಿಂದನ ಕಡೆಗೆ ಕರೆದೊಯ್ಯುತ್ತಾನೇಂಬ ನಾಣ್ಣುಡಿ ಒಂದು ಕಾಲಕಿತ್ತು. ಆದರೇ ಪ್ರಸ್ತುತ ಮಕ್ಕಳನ್ನು ಕೇಳಿದರೇ ಗುರುವೇ ಗೂಗಲ್ ಎಂದು ಆಯ್ಕೆಮಾಡಿಕೊಳ್ಳುವ ಮನಸ್ಥಿಗೆ ಬಂದು ತಲುಪಿದ್ದಾರೆ. ಆದರೆ ಆ ಅಂತರ್ಜಾಲಕ್ಕೆ ಮಾಹಿತಿಯನ್ನು ತುಂಬುವವರೆ ಗುರು ಎಂಬುದನ್ನು ಮರೆಯಬಾರದು ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭು, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ಕ್ಷೇತ್ರ ಸಂಪನ್ಮೂಲಕ ವ್ಯಕ್ತಿ ಬಾಬು, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಗುರುಸ್ವಾಮಿ, ಪಿಡಿಒ ಈರಣ್ಣಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net