ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ

14 NRD
Published on

ನರಗುಂದ: ವಿದ್ಯಾರ್ಥಿ ಜೀವನ ಅಮೂಲ್ಯ. ಅದನ್ನು ಹಾಳು ಮಾಡಿಕೊಳ್ಳದೆ ಸಾರ್ಥಕಗೊಳಿಸಬೇಕು. ಮೊಬೈಲ್ ಬಳಕೆಯಿಂದ ಓದು ನಿಲ್ಲುತ್ತಿದೆ. ವಿದ್ಯಾರ್ಥಿಗಳಾದವರು ಮೊಬೈಲ್, ಟಿವಿಯಿಂದ ದೂರ ಉಳಿದು, ಪುಸ್ತಕ ಹಿಡಿಯಬೇಕು ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕ ಎಂ.ಎಸ್.ಯಾವಗಲ್ ಹೇಳಿದರು.
ಪಟ್ಟಣದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡೆ ಹಾಗೂ ವಿಜ್ಞಾನ ಚಟುವಟಿಕೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿ ಜೀವನ ಬಂಗಾರದ ಜೀವನವಾಗಿಸಿಕೊಳ್ಳಲು ನಿರಂತರ ಪ್ರಯತ್ನ ಮಾಡಬೇಕು. ತಂದೆ-ತಾಯಿಗೆ, ಕಲಿತ ಸಂಸ್ಥೆಗೆ ಹೆಸರು ಬರುವಂತೆ ಅಭ್ಯಾಸ ಮಾಡಬೇಕು ಎಂದು ಸಲಹೆ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಜಿ.ಟಿ. ಗುಡಿಸಾಗರ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆ ಅಗತ್ಯವಿದೆ. ವಿದ್ಯಾರ್ಥಿಗಳು ಮುಖ್ಯವಾಗಿ ಸಮಯಪ್ರಜ್ಞೆ ಹಾಗೂ ಶಿಸ್ತು ರೂಡಿಸಿಕೊಳ್ಳಬೇಕು ಎಂದರು. ನೂತನ ಶಾಲಾ ಸಂಸತ್ ಸದಸ್ಯರಿಗೆ ಹಿರಿಯ ನಿರ್ದೇಶಕ ಜಿ.ಬಿ. ಕುಲಕರ್ಣಿ ಪ್ರಮಾಣವಚನ ಬೋಧಿಸಿದರು. ಸಿ.ಎಸ್. ಸಾಲೂಟಗಿಮಠ ಇದ್ದರು. ಮುಖ್ಯ ಶಿಕ್ಷಕ. ಡಾ.ವೈ.ಪಿ. ಕಲ್ಲನಗೌಡ್ರ ಸ್ವಾಗತಿಸಿದರು. ಡಾ. ಬಸವರಾಜ ಹಲಕುರ್ಕಿ ಅತಿಥಿಗಳನ್ನು ಪರಿಚಯಿಸಿದರು. ಸ್ಪರ್ಶ ಗುಜಮಾಗಡಿ, ಸೌಜನ್ಯಾ ನೇಸರಗಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net