ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ

Upanyaasa Lead
Published on

ಡಾ. ಗಣೇಶಪ್ರಸಾದ್​ ನಾಯಕ್​ ಸಲಹೆ

ಆಶುಭಾಷಣ ಸ್ಪರ್ಧೆ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ

ವಿದ್ಯಾರ್ಥಿಗಳಿಗೆ ತಮ್ಮ ಪಠ್ಯದ ಜತೆಗೆ ಸಾಹಿತ್ಯದ ಕುರಿತು ಅಭಿರುಚಿ ಇದ್ದರೆ ಮಾತ್ರ ನಮ್ಮ ನಾಡಿನ ಭಾಷೆ ಉಳಿಯಲು ಸಾಧ್ಯ. ಕನ್ನಡವನ್ನು ಉಳಿಸಿ, ಬೆಳೆಸುವುದು ಕೇವಲ ಸಂಘ-ಸಂಸ್ಥೆಗಳ ಕಾರ್ಯ ಎಂದು ಭಾವಿಸಬಾರದು. ಅದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಆ ನಿಟ್ಟಿನಲ್ಲಿ ಎಲ್ಲ ವಿದ್ಯಾರ್ಥಿಗಳೂ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಾರ್ಯ ಉಪನ್ಯಾಸಕ, ಬರಹಗಾರ ಡಾ.ಗಣೇಶಪ್ರಸಾದ್​ ನಾಯಕ್​ ಸಲಹೆ ನೀಡಿದರು.

Upanyaasa 2
ಉಡುಪಿಯ ಅಜ್ಜರಕಾಡುನಲ್ಲಿರುವ ಡಾ. ಜಿ.ಶಂಕರ್​ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ&ಕನ್ನಡ ಡಿಂಡಿಮದ ನಿಮಿತ್ತ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲಾ ಡಾ. ಶಿವರಾಮ ಕಾರಂತ ಟ್ರಸ್ಟ್​ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಮತ್ತು ಯುವ ಪ್ರತಿಭೆಗಳಿಗೆ ನನ್ನ ನೆಚ್ಚಿನ ಸಾಹಿತಿ ಆಶುಭಾಷಣ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಕಾರಂತರು ಕನ್ನಡದ ಆಸ್ತಿ

ಡಾ. ಶಿವರಾಮ ಕಾರಂತ ಟ್ರಸ್ಟ್​ನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಡಾ. ಕಾರಂತರು ಮತ್ತು ಅವರ ಚಿಂತನೆಗಳು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತವಾಗಬಾರದು. ಕಾರಂತರು ಕನ್ನಡದ ಆಸ್ತಿ. ರಾಜ್ಯದ ಉದ್ದಗಲಕ್ಕೂ ಅವರ ಚಿಂತನೆಗಳು ತಲುಪಬೇಕಾಗಿದೆ ಎಂದರು.

Upanyaasa 3
ನಿವೃತ್ತ ಪತ್ರಕರ್ತ ನಿತ್ಯಾನಂದ ಪಡ್ರೆ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಸೋಜನ್​ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು. ಐಕ್ಯುಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ರೇಖಾ, ಸಹ ಪ್ರಾಧ್ಯಾಪಕಿ ರಮ್ಯಾ ಐತಾಳ, ಕನ್ನಡ ವಿಭಾಗದ ಉಪನ್ಯಾಸಕರಾದ ಚಂದ್ರ ಹಾಗೂ ತ್ರಿವೇಣಿ, ಡಾ.ಕಾರಂತ ಟ್ರಸ್ಟ್​ನ ಸದಸ್ಯ ಜಿ.ಎಂ. ಶರೀಫ್​ ಹೂಡೆ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನಾ ಸ್ವಾಗತಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಪ್ರಸನ್ನ ಪಿ.ಬಿ. ಕಾರ್ಯಕ್ರಮ ನಿರೂಪಿಸಿದರು. ಡಾ. ಕಾರಂತ ಟ್ರಸ್ಟ್​ನ ಸದಸ್ಯ ಸತೀಶ್​ ಕೊಡವೂರು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net