ಸ್ವಾತಂತ್ರ್ಯ ಹೋರಾಟಗಾರರು ಕುರಿತ ಉಪನ್ಯಾಸ

new collage
Published on

ಹುಬ್ಬಳ್ಳಿ : ನಗರದ ಡಾ. ಆರ್.ಬಿ. ಪಾಟೀಲ ಮಹೇಶ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಂಗಳವಾರದಂದು 77ನೇ ಸ್ವಾತಂತ್ರೊ್ಯೕತ್ಸವದ ಅಂಗವಾಗಿ ಅವಿಭಜಿತ ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ಕುರಿತು ವಿಶೇಷ ಉಪನ್ಯಾಸ ಮಾಲಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

‘ಸ್ವಾತಂತ್ರ್ಯ ಹೋರಾಟಗಾರ ವೀರ ಸಂಗೊಳ್ಳಿ ರಾಯಣ್ಣ’ ಕುರಿತು ಉಪನ್ಯಾಸ ನೀಡಿದ ಅತಿಥಿಯಾಗಿದ್ದ ಇಲ್ಲಿನ ಗೋಕುಲದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಫ್.ಬಿ. ಸೊರಟೂರ, ಬ್ರಿಟೀಷರ ವಿರುದ್ಧ ಹೋರಾಡಿದ ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಉಣಕಲ್ಲನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರೊ. ಬಿ.ಎನ್. ನವಲಗುಂದ, ಸ್ವಾತಂತ್ರ್ಯಕ್ಕಿಂತ ಪೂರ್ವದಲ್ಲಿ ದೇಶಭಕ್ತರ ತ್ಯಾಗ, ಬಲಿದಾನಗಳ ಕುರಿತು ಬಣ್ಣಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ರಾಮ ಮೋಹನ ಎಚ್. ಕೆ., ವಿದ್ಯಾರ್ಥಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ದೇಶ ಪ್ರೇಮವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಯಲ್ಲಪ್ಪ ತಿರ್ಲಕೊಪ್ಪ ಮತ್ತು ತಂಡ, ಶ್ರೀಕೃಷ್ಣ ಗೀಗೀಮೇಳ ಹಾಗೂ ಜನಪದ ಕಲಾ ತಂಡದವರು ದೇಶ ಭಕ್ತಿಗೀತೆಗಳನ್ನು ಹಾಡಿದರು. ಕಾಲೇಜಿನ ಉಪ ಪ್ರಾಚಾರ್ಯ ರಮೇಶ ಹೊಂಬಾಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗಣಿತ ವಿಭಾಗದ ಮುಖ್ಯಸ್ಥರಾದ ಪ್ರದೀಪ ಅಗಸಿಮನಿ ಸ್ವಾಗತಿಸಿ, ಪರಿಚಯಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಐ.ಎಸ್. ಹಿರೇಮಠ ನಿರೂಪಿಸಿದರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥರಾದ ಪ್ರೊ. ನೀಲ್ ಪ್ರತಾಪನ್ ವಂದಿಸಿದರು.

ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net