ಕಾಸರಗೋಡಿನ ಸಂಸ್ಕೃತಿಯ ವಾಹಕ ಕನ್ನಡ-ತುಳು : ಪ್ರೊ.ಪಿ.ಎನ್.ಮೂಡಿತ್ತಾಯ ಪ್ರತಿಪಾದನೆ

New Project (24)
Published on

ಕಾಸರಗೋಡು: ಕನ್ನಡ ಮತ್ತು ತುಳು ಭಾಷೆಗಳು ಕಾಸರಗೋಡಿನ ಸಂಸ್ಕೃತಿಯ ವಾಹಕಗಳಾಗಿದ್ದು, ಇವುಗಳೆರಡೂ ಭಾಷಾ ಬಾಂಧವ್ಯದ ಪ್ರತೀಕವಾಗಿವೆ ಎಂದು ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷ ಪ್ರೊ.ಪಿ.ಎನ್.ಮೂಡಿತ್ತಾಯ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ, ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಗುಮ್ಮಣ್ಣ ಶೆಟ್ಟಿ ಜೈನ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ, ‘ಕನ್ನಡ ತುಳು ಭಾಷಾ ಬಾಂಧವ್ಯ’ ಕುರಿತು ಮಾತನಾಡಿದರು.

ಕಸಾಪ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದರು. ಕ್ಯಾಂಪ್ಕೋ ಮಾಜಿ ಉಪಾಧ್ಯಕ್ಷ ಸತೀಶ್ಚಂದ್ರ ಭಂಡಾರಿ ಕೋಳಾರು, ಪ್ರಾಂಶುಪಾಲ ರಾಮಚಂದ್ರ ಭಟ್ ಎನ್, ನಿವೃತ್ತ ಪ್ರಾಂಶುಪಾಲ ಡಾ.ಕೆ.ಕಮಲಾಕ್ಷ ಮುಖ್ಯ ಅತಿಥಿಗಳಾಗಿದ್ದರು. ಕಸಾಪ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಕನ್ನಡ-ತುಳು ಭಾವ ಗಾಯನ ನಡೆಸಿದರು. ಕಸಾಪ ಸಂಘಟನಾ ಕಾರ್ಯದರ್ಶಿಗಳಾದ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿದರು. ಉಪನ್ಯಾಸಕ ಸತೀಶ್ ಕುಮಾರ್ ಶೆಟ್ಟಿ ಒಡ್ಡಂಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಪಿ.ರಾಮಚಂದ್ರ ಭಟ್ ಧರ್ಮತ್ತಡ್ಕ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net