ಉಪನ್ಯಾಸ ಕಾರ್ಯಕ್ರಮ ಆಗಸ್ಟ್ 23ರಂದು

Special Lecture
Published on

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಆ. 23ರಂದು ಸಂಜೆ 4.30 ಕ್ಕೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಆಶ್ರಯದಲ್ಲಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.

ಯಕ್ಷಗಾನ ಅರ್ಥಧಾರಿ ವಾಸುದೇವ ರಂಗ ಭಟ್ಟ ಅವರು ‘ವರ್ತಮಾನದ ಭಾರತದಲ್ಲಿ ಶ್ರೀರಾಮನ ಪ್ರಸ್ತುತತೆ’ ಕುರಿತು ಉಪನ್ಯಾಸ ನೀಡಲಿದ್ದಾರೆ.

ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಅಧ್ಯಕ್ಷತೆ ವಹಿಸಲಿದ್ದಾರೆ. ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಜಿ.ಭಟ್ಟ ಸಂಕದಗುಂಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಪತ್ರಕರ್ತ ವಿಶ್ವೇಶ್ವರ ಗಾಂವ್ಕಾರ, ಕಸಾಪ ತಾಲೂಕು ಅಧ್ಯಕ್ಷ ವಿದ್ವಾನ್ ಸುಬ್ರಹ್ಮಣ್ಯ ಭಟ್, ಗೌರವ ಕಾರ್ಯದರ್ಶಿಗಳಾದ ಸಂಜೀವಕುಮಾರ ಹೊಸ್ಕೇರಿ, ಜಿ.ಎನ್.ಭಟ್ಟ ತಟ್ಟಿಗದ್ದೆ, ಕೋಶಾಧ್ಯಕ್ಷ ಡಿ.ಎನ್. ಗಾಂವ್ಕಾರ, ಪ್ರಮುಖರಾದ ಗಣಪತಿ ಬಾಳೆಗದ್ದೆ, ವಿಘ್ನೕಶ್ವರ ಭಟ್ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net