ಆ.೨೬ ರಂದು ಉಪನ್ಯಾಸ ಕಾರ್ಯಕ್ರಮ

MUNEER ahamadh
Published on

ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡ್ಲಿಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಲಸಿನ ಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜು ಕೊಡ್ಲಿಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಶರಣ ಸಂಸ್ಕೃತಿಯ ಕುರಿತು ಉಪನ್ಯಾಸ ಕಾರ್ಯಕ್ರಮ ಕೊಡ್ಲಿಪೇಟೆಯ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆ೨೬ ರಂದು ಬೆಳಗ್ಗೆ ೧೧ ಗಂಟೆಗೆ ಏರ್ಪಡಿಸಲಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನಿರ್ ಅಹಮದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್‌ರವರು ವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಆಶೀರ್ವಚನವನ್ನು ಕಿರಿಕೊಡ್ಲಿ ಮಠದ ಪೀಠಾಧಿಪತಿ ಸದಾಶಿವ ಸ್ವಾಮೀಜಿಗಳು ನೀಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉಚ್ಚ ನ್ಯಾಯಾಲಯದ ಹಿರಿಯ ವಕೀಲ ಎಚ್.ಎಸ್.ಚಂದ್ರಮೌಳಿ ನೆರವೇರಿಸಲಿದ್ದಾರೆ. ಶರಣ ಸಂಸ್ಕೃತಿಯ ಕುರಿತು ಪತ್ರಕರ್ತ ಎಸ್.ಮಹೇಶ್ ಉಪನ್ಯಾಸ ನೀಡಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲ ಎಂ.ಆರ್.ನಿರಂಜನ್, ದತ್ತಿದಾನಿ ಮಹಾಶರಣ ಮಾಗನೂರು ಬಸಪ್ಪ ಟ್ರಸ್ಟ್‌ನ ಕಾರ್ಯದರ್ಶಿ ಸಂಗಮೇಶ್ವರ ಗೌಡ, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಡಿ.ವಿಜೇತ್, ಕೊಡ್ಲಿಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಪಿ.ಶಾಂತಮಲ್ಲಪ್ಪ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಹೋಬಳಿಯಲ್ಲಿ ಕಳೆದ ಸಾಲಿನಲ್ಲಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಶೇ.೧೦೦ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ಎಸ್.ಐ.ಮುನಿರ್ ಅಹಮದ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net