ಪರಿಸರ ನಾಶದಿಂದ ಭವಿಷ್ಯದ ಪೀಳಿಗೆಗೆ ದುಷ್ಪರಿಣಾಮ

Upanyaasa
Published on

ಡಾ. ಕೃಷ್ಣ ಕೊಥೈ ಆತಂಕ

ಪೂರ್ಣಪ್ರಜ್ಞ ಕಾಲೇಜಿನಲ್ಲಿ ಉಪನ್ಯಾಸ

ವಿಜಯವಾಣಿ ಸುದ್ದಿಜಾಲ ಉಡುಪಿ

ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರ ನಾಶ ಪಡಿಸುತ್ತಿದ್ದು, ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದಲ್ಲಿ ಭವಿಷ್ಯದ ಪೀಳಿಗೆಯ ಮೇಲೆ ಭಾರಿ ದುಷ್ಪರಿಣಾಮ ಎದುರಾಗಲಿದೆ. ಕಾಡುಗಳ ನಾಶದಿಂದಾಗಿ ಮಣ್ಣು ಹಾಗೂ ನೀರಿನ ಮೇಲೂ ಸಹ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಇದರ ಜತೆಗೆ ಜಾಗೃತಿಯ ನಡುವೆಯೂ ಪ್ಲಾಸ್ಟಿಕ್​ ಬಳಕೆ ಮುಂದುವರಿದಿದ್ದು ಪರಿಸರ ಹಾನಿ ನಿರಂತರ ಎಂಬಂತಾಗಿದೆ ಎಂದು ಪೂರ್ಣಪ್ರಜ್ಞ ಕಾಲೇಜಿನ ಸಂಶೋಧನಾ ಮತ್ತು ಅಭಿವೃದ್ಧಿ ಕೋಶದ ಸಂಯೋಜಕ ಡಾ. ಕೃಷ್ಣ ಕೊಥೈ ಆತಂಕ ವ್ಯಕ್ತಪಡಿಸಿದರು.

ಉಡುಪಿಯ ಪೂರ್ಣಪ್ರಜ್ಞ ಕಾಲೇಜ್​ (ಸ್ವಾಯತ್ತ)ನಲ್ಲಿ ಸಂಶೋಧನಾ ಮತ್ತು ಅಭಿವೃದ್ಧಿ ಕೋಶ ಮತ್ತು ರಸಾಯನಶಾಸ್ತ್ರ ವಿಭಾಗವು ಪರಿಸರ ವಿಜ್ಞಾನ ಮತ್ತು ಪರಿಸರ ಸುಸ್ಥಿರತೆಯ ಕುರಿತು ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸಮಸ್ಯೆಗಳನ್ನು ನಿವಾರಿಸುವ ಮಾರ್ಗಗಳ ಕುರಿತಂತೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಅವರು, ಪರಿಸರದ ಬಗ್ಗೆ ಕಾಳಜಿ ವಹಿಸುವುದು ವಿದ್ಯಾರ್ಥಿಗಳಾದ ನಿಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ ಎಂದು ತಿಳಿಸಿದರು.

ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮಹೇಶ್​ ಭಟ್​, ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಪರ್ಣಾ, ಆರ್​ ಆ್ಯಂಡ್​ ಡಿ ಸೆಲ್​ನ ಸದಸ್ಯ ರಂಗಸ್ವಾಮಿ ಜೆ. ಉಪಸ್ಥಿತರಿದ್ದರು. ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಸಂಘವಿ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net