

ವಿಜಯವಾಣಿ ಸುದ್ದಿಜಾಲ ಧಾರವಾಡ
ಕನಕ ಜಯಂತಿ ನಿಮಿತ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನ. 18ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕನಕದಾಸರ ಕುರಿತು ಸಾಹಿತಿ ಮಾರ್ತಾಂಡಪ್ಪ ಕತ್ತಿ ಉಪನ್ಯಾಸ ನೀಡುವರು. ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.