ಉಪನ್ಯಾಸ ಇಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ವೀರಾಪುರ ಸರ್ಕಾರಿ ಪ್ರೌಢ ಶಾಲೆ ಸಹಯೋಗದಲ್ಲಿ ಆ. 31ರಂದು ಬೆಳಗ್ಗೆ 11 ಗಂಟೆಗೆ ವೀರಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮ ಮತ್ತು ಭಾರತದ 78ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟದ ಆ ದಿನಗಳು ಪಠ್ಯಾಧಾರಿತ ವಿಷಯ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಉಪನ್ಯಾಸ ಆಯೋಜಿಸಿದೆ.
ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮ ಉದ್ಘಾಟಿಸುವರು. ಹೊಂಬೆಳಕು ಪ್ರತಿಷ್ಠಾನದ ಅಧ್ಯಕ್ಷ ಡಾ. ವೀಣಾ ಬಿರಾದಾರ ಕ್ವಿಟ್​ ಇಂಡಿಯಾ ಚಳವಳಿಯಲ್ಲಿ ಧಾರವಾಡ ಜಿಲ್ಲಾ ಹೋರಾಟಗಾರರ ಪಾತ್ರ ಕುರಿತು ಉಪನ್ಯಾಸ ನೀಡುವರು. ಸರ್ಕಾರಿ ಪ್ರೌಢ ಶಾಲೆ ಎಸ್​ಡಿಎಂಸಿ ಅಧ್ಯಕ್ಷ ಈರನಗೌಡ ಪಾಟೀಲ ಅತಿಥಿಯಾಗಿ ಆಗಮಿಸುವರು. ಸರ್ಕಾರಿ ಪ್ರೌಢ ಶಾಲೆ ಮುಖ್ಯಾಧ್ಯಾಪಕಿ ಮಂಗಳಗೌರಿ ಬಡಿಗೇರ ಅಧ್ಯಕ್ಷತೆ ವಹಿಸುವರು. ಶಿಕ್ಷಣ ಮಂಟಪ ಸಂಚಾಲಕ ವೀರಣ್ಣ ಒಡ್ಡೀನ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net