ಉಪನ್ಯಾಸ ಇಂದು

WEB LOGO
Published on

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ಮಕ್ಕಳ ಮಂಟಪವು ಕರಡಿಗುಡ್ಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸುವರ್ಣ ಕರ್ನಾಟಕ ಸಂಭ್ರಮ ನಿಮಿತ್ತ ಅ. 1ರಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ವ್ಯಕ್ತಿತ್ವ ವಿಕಸನ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಿದೆ.
ಕರಡಿಗುಡ್ಡದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಿಬಿಸಿ ಉಪಾಧ್ಯ ಮಹಾಬಳೇಶ್ವರ ಸಂಗಪ್ಪನವರ ಕಾರ್ಯಕ್ರಮ ಉದ್ಘಾಟಿಸುವರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ವೀರಣ್ಣ ಒಡ್ಡೀನ ಉಪನ್ಯಾಸಕರಾಗಿ ಆಗಮಿಸುವರು. ಕಾಲೇಜಿನ ಪ್ರಾಚಾರ್ಯ ನಂದೀಶ ಕಾಖಂಡಕಿ ಅಧ್ಯಕ್ಷತೆ ವಹಿಸುವರು. ಕಾಲೇಜಿನ ಉಪ ಪ್ರಾಚಾರ್ಯ ಮಂಜುನಾಥ ಮುದಕಪ್ಪನವರ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net