ಉಪನ್ಯಾಸ ಇಂದು

WEB LOGO
Published on

ಧಾರವಾಡ: ಮಾಜಿ ಶಾಸಕ ವೈ.ಎಸ್​. ಪಾಟೀಲ ಸ್ಮಾರಕ ಪ್ರತಿಷ್ಠಾನ ಆಶ್ರಯದಲ್ಲಿ ಅ. 1ರಂದು ಸಂಜೆ 6 ಗಂಟೆಗೆ ರಂಗಾಯಣ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ.
ರಾಜ್ಯ ಹೈಕೋರ್ಟ್​ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ ಅವರು ಪ್ರಜಾಪ್ರಭುತ್ವದಲ್ಲಿ ಕಾನೂನು ಧರ್ಮ ಪರಿಪಾಲನೆ ಕುರಿತು ಉಪನ್ಯಾಸ ನೀಡುವರು. ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ, ಪ್ರೊ. ಮೋಹನ ಸಿದ್ಧಾಂತಿ, ಹಿರಿಯ ನ್ಯಾಯವಾದಿ ವಿ.ಎಂ. ಶೀಲವಂತ ಪಾಲ್ಗೊಳ್ಳಲಿದ್ದಾರೆ. ನಿವೃತ್ತ ನ್ಯಾಯಾಧೀಶ ಎಸ್​.ಎಚ್​. ಮಿಟ್ಟಲಕೋಡ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net