

ಮಂಗಳೂರು: ದ.ಕ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘವನ್ನು ರಚಿಸುವ ಕುರಿತು ಸಮಾಲೋಚನ ಸಭೆಯನ್ನು ಕರೆಯಲಾಗಿದೆ. ಜೂ.22ರಂದು ಮಧ್ಯಾಹ್ನ 2.30ಕ್ಕೆ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಬಲ್ಮಠದಲ್ಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲೆಯ ಎಲ್ಲ ಉಪನ್ಯಾಸಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಚಾಲಕ ಚಂದ್ರನಾಥ ಎಂ. ತಿಳಿಸಿದ್ದಾರೆ.