ನೇರಪ್ರಸಾರ ವೀಕ್ಷಿಸಲು ಎಲ್ಇಡಿ ಪರದೆ ವ್ಯವಸ್ಥೆ

ಆರ್‌ಸಿಬಿ ತಂಡದ ಕಪ್ ಗೆದ್ದ ಹಿನ್ನೆಲೆ ರಾಯಚೂರಿನ ಬಸವೇಶ್ವರ ವೃತ್ತದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಆರ್‌ಸಿಬಿ ತಂಡದ ಕಪ್ ಗೆದ್ದ ಹಿನ್ನೆಲೆ ರಾಯಚೂರಿನ ಬಸವೇಶ್ವರ ವೃತ್ತದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.
Published on

ರಾಯಚೂರು: ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ 18 ವರ್ಷಗಳ ನಂತರ ಕಪ್ ಗೆದ್ದಿರುವ ಹಿನ್ನೆಲೆ ಎಡೆದೊರೆ ನಾಡಿನಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಜಿಲ್ಲಾಧ್ಯಂತ ಮಂಗಳವಾರ ತಡರಾತ್ರಿ ಅಭಿಮಾನಿಗಳು ಪಟಾಕಿ ಸಿಡಿಸಿ, ಕುಣಿದು ವಿಜಯೋತ್ಸವ ಆಚರಿಸಿದರು.

ನಗರದ ಮಹಿಳಾ ಸಮಾಜದ ಆವರಣದಲ್ಲಿ ಮಂಗಳವಾರ ಫೈನಲ್ ಪಂದ್ಯದ ನೇರಪ್ರಸಾರ ವೀಕ್ಷಿಸಲು ಎಲ್ಇಡಿ ಪರದೆ ವ್ಯವಸ್ಥೆ ಮಾಡಲಾಗಿತ್ತು. ಆರ್‌ಸಿಬಿ ತಂಡ ಬ್ಯಾಟಿಂಗ್ ಮಾಡುವಾಗ ಫೋರ್, ಸಿಕ್ಸ್ ಹೊಡೆಯುತ್ತಿದ್ದಂತೆ ಹಾಗೂ ಪಂಜಾಬ್ ತಂಡ ಬ್ಯಾಟಿಂಗ್ ಮಾಡುವಾಗ ವಿಕೆಟ್ ಉರುಳುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳ ಸಂಭ್ರಮಕ್ಕೆ ಪಾರವೇ ಇಲ್ಲದಾಗಿತ್ತು. ಅಂತಿಮವಾಗಿ 6 ರನ್‌ಗಳ ಅಂತರದಲ್ಲಿ ಆರ್‌ಸಿಬಿ ಗೆಲ್ಲುತ್ತಿದ್ದಂತೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಬಾಬು ಜಗಜೀವನರಾಮ್ ವೃತ್ತಗಳಲ್ಲಿ ಸಿಹಿ ಹಂಚಿ, ಕುಣಿದು, ಕನ್ನಡ ಬಾವುಟ ಹಿಡಿದು, ಸಿಡಿಮದ್ದುಗಳನ್ನು ಸಿಡಿಸಿ ಸಂಭ್ರಮಿದರು. ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net