ಮಹಿಳಾ ಕಾಂಗ್ರೆಸ್​ ರಾಜ್ಯ ಕಾರ್ಯದರ್ಶಿಯಾಗಿ ಲೀಲಾವತಿ ಆಯ್ಕೆ

LEELAVATI
Published on

ರಟ್ಟಿಹಳ್ಳಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯನ್ನಾಗಿ ತಾಲೂಕಿನ ಹೊಸಕಟ್ಟಿ ಗ್ರಾಮದ ಲೀಲಾವತಿ ಕೆ.ಸಿ. ಹನುಮಂತರಾಯಪ್ಪ ಗೋಣಗೇರಿ ಅವರನ್ನು ಆಯ್ಕೆ ಮಾಡಲಾಗಿದೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ, ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ನೆಟ್ಟ ಡಿಸೋಜಾ ಅವರ ಆದೇಶದ ಮೇರೆಗೆ ರಾಜ್ಯ ಅಧ್ಯಕ್ಷೆ ಡಾ.ಬಿ. ಪುಷ್ಪಾ ಅಮರನಾಥ್ ಅವರು ಲೀಲಾವತಿ ಅವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net