ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

8-KGLPHOTO-1 )
ಕೊಳ್ಳೇಗಾಲ ಶ್ರೀ ಬಸವೇಶ್ವರನಗರದಲ್ಲಿರುವ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ನಿವಾಸದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆಗೊಂಡರು. ಬಾಗಳಿ ರಘು, ಮಲ್ಲೇಶ್, ಕೆಂಪಶೆಟ್ಟಿ, ಸಿದ್ದೇಶ್ ಇತರರು ಇದ್ದರು.
Published on

ಕೊಳ್ಳೇಗಾಲ: ಪಟ್ಟಣದ ಶ್ರೀ ಬಸವೇಶ್ವರ ನಗರದಲ್ಲಿರುವ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಅವರ ನಿವಾಸದಲ್ಲಿ ಸೋಮವಾರ ಕೆಲವು ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು.

ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಸಮ್ಮುಖದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಮ್ಮತ್ತೂರಿನ ಬಾಗಳಿ ರಘು, ಮಲ್ಲೇಶ್, ಗ್ರಾಪಂ ಮಾಜಿ ಸದಸ್ಯ ಕೆಂಪಶೆಟ್ಟಿ, ಸಿದ್ದೇಶ್, ನಂದ ಹಾಗೂ ಸಿದ್ದರಾಜು ಸೇರ್ಪಡೆಗೊಂಡರು. ಈ ವೇಳೆ ಎಸ್. ಬಾಲರಾಜ್ ಪಕ್ಷಕ್ಕೆ ಬಂದ ಮುಖಂಡರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಎಸ್.ಬಾಲರಾಜ್ ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಲೆ ಎದ್ದಿದೆ. ಈ ಬಾರಿ ನನಗೆ ಅಮೂಲ್ಯವಾದ ಮತಗಳನ್ನು ನೀಡುವ ಮೂಲಕ 3ನೇ ಬಾರಿಗೆ ಮೋದಿ ಅವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಬೇಕು. ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net