ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

31M.D.R.3
ಮದ್ದೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ, .ಪಂ ಮಾಜಿ ಅಧ್ಯಕ್ಷ ಪಿ.ಸಂದರ್ಶ ಶಾಸಕ ಕೆ.ಎಂ.ಉದಯ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರಿದರು. ಅಜ್ಜಹಳ್ಳಿ ರಾಮಕೃಷ್ಣ, ತೈಲೂರು ಚಲುವರಾಜು, ಟಿ.ಆರ್.ಪ್ರಸನ್ನಕುಮಾರ್, ಸುರೇಶ್‌ಕಂಠಿ, ಪಿ.ರಾಜೀವ್ ಇದ್ದರು.
Published on

ಮದ್ದೂರು: ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ, ಮದ್ದೂರು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಸಂದರ್ಶ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು.

ಪಟ್ಟಣದ ಶಿವಪುರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಶಾಸಕ ಕೆ.ಎಂ.ಉದಯ ಸಮ್ಮುಖದಲ್ಲಿ ಅಕೃತವಾಗಿ ಮರಳಿ ಮಾತೃಪಕ್ಷ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಶಾಸಕ ಕೆ.ಎಂ.ಉದಯ ಮಾತನಾಡಿ, ಯಾವುದೇ ಪಕ್ಷದ ಕಾರ್ಯಕರ್ತರು, ಮುಖಂಡರು, ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಆಗಮಿಸಿದರೆ ಅವರಿಗೆ ಸ್ವಾಗತ ಕೋರಲಾಗುವುದು. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿ ತಾಲೂಕಿನಲ್ಲಿ ಅನ್ಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿರುವುದು ಪಕ್ಷಕ್ಕೆ ಮತ್ತಷ್ಟು ಬಲ ಬರುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಸಗರಹಳ್ಳಿ, ರಾಂಪು, ವಳಗೆರೆಹಳ್ಳಿ, ಸೊಳ್ಳೆಪುರ, ಚಾಮನಹಳ್ಳಿ ಮತ್ತಿತರ ಗ್ರಾಮಗಳಿಂದ ಆಗಮಿಸಿದ ಹೆಚ್ಚಿನ ಸಂಖ್ಯೆಯ ಜೆಡಿಎಸ್ ಕಾರ್ಯಕರ್ತರು ಪಿ.ಸಂದರ್ಶ ಅವರೊಟ್ಟಿಗೆ ಕಾಂಗ್ರೆಸ್ ಸೇರ್ಪಡೆಗೊಂಡರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು, ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ರಾಜೀವ್, ಪುರಸಭೆ ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸದಸ್ಯ ಬಸವರಾಜು, ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್‌ಕಂಠಿ, ಮುಖಂಡರಾದ ಎಂ.ಡಿ.ಮಹಾಲಿಂಗಯ್ಯ, ಪುಟ್ಟರಾಮು, ಕೃಷ್ಣ, ಮಹದೇವಯ್ಯ, ಪುಟ್ಟಸ್ವಾಮಿ, ರಾಮಚಂದ್ರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net