ಹಣದ ಆಮಿಷ ದೂರು ಬಂದರೆ ಕಾನೂನು ಕ್ರಮ

web 8
Published on

ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಆಯ್ಕೆ ಕುರಿತು ಹಣದ ಆಮಿಷ ಒಡ್ಡುತ್ತಿರುವ ದೂರು ಕೇಳಿಬರುತ್ತಿವೆ. ನೇಮಕಾತಿಯನ್ನು ಇಲಾಖೆಯ ಮಾರ್ಗಸೂಚಿಯನ್ವಯ ನಿಗದಿಪಡಿಸಿದ ಅರ್ಹತೆ ಹಾಗೂ ಅಂಕಗಳ ಆಧಾರದ ಮೇಲೆ ಜಿಲ್ಲಾ ಸಮಿತಿಯಲ್ಲಿ ಆಯ್ಕೆ ಮಾಡಲಾಗಿದೆ. ಮಧ್ಯವರ್ತಿಗಳು, ಇಲಾಖೆಯ ಅಽಕಾರಿ- ಸಿಬ್ಬಂದಿಗೆ ಹಣ ನೀಡಬಾರದು. ಹಣ ನೀಡಿದವರ ಹಾಗೂ ಹಣ ಪಡೆದವರ ಮೇಲೆ ಕಾನೂನು ಕ್ರಮ ಕೈಗೊಂಡು ನೇಮಕಾತಿಯನ್ನು ರದ್ದುಗೊಳಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಯಾರಾದರೂ ಹಣ ಕೇಳಿದರೆ ಜಿಲ್ಲಾಽಕಾರಿ ಕಚೇರಿಗೆ ದಾಖಲೆ ಸಮೇತ ದೂರು ಸಲ್ಲಿಸಬೇಕು ಎಂದು ಜಿಲ್ಲಾಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net