

ಧಾರವಾಡ: ರಾಜ್ಯ ಸರ್ಕಾರದಿಂದ ರೈತರ ಬ್ಯಾಂಕ್ ಖಾತೆಗೆ ಜಮೆಯಾಗುವ ಬರ ಪರಿಹಾರ, ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೆ ಸಾಲದ ಖಾತೆಗೆ ಹೊಂದಾಣಿಕೆ ಮಾಡುವಂತಿಲ್ಲ. ಈ ಬಗ್ಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಎಲ್ಲ ಬ್ಯಾಂಕ್‌ಗಳಿಗೆ ತಿಳಿಸಲಾಗಿದೆ. ಆದಾಗ್ಯೂ ಕುಂದಗೋಳ, ನವಲಗುಂದ ಸೇರಿ ಕೆಲವೆಡೆ ದೂರುಗಳು ಬರುತ್ತಿವೆ. ಆದೇಶ ಉಲ್ಲಂಘಿಸುವ ಬ್ಯಾಂಕ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಬ್ಯಾಂಕರ್ಸ್ ಪ್ರಗತಿ ಪರಿಶೀಲನಾ ಸಮಿತಿಯ ಸಹ ಅಧ್ಯಕ್ಷೆ ಹಾಗೂ ಜಿಲ್ಲಾಽಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, ೨೦೨೪ರ ಮುಂಗಾರು ವಿಫಲವಾಗಿದ್ದರಿಂದ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪಡೀತ ಎಂದು ಘೋಷಿಸಲಾಗಿದೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭವಾಗುತ್ತಿರುವುದರಿAದ ರೈತರು ಬಿತ್ತನೆಗೆ ಬೀಜ, ಗೊಬ್ಬರ ಖರೀದಿಸಬೇಕು. ರೈತರ ಸಹಮತವಿಲ್ಲದೆ, ಬರ ಪರಿಹಾರದ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿಕೊಂಡರೆ ಆಯಾ ಬ್ಯಾಂಕ್ ಮುಖ್ಯಸ್ಥರು ಮತ್ತು ಬ್ಯಾಂಕ್ ಶಾಖಾ ವ್ಯವಸ್ಥಾಪಕರನ್ನು ಜವಾಬ್ದಾರರನ್ನಾಗಿಸಲಾಗುವುದು ಎಂದು ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.